ದೇಶ

ಕೈಲಾಸ ಯಾತ್ರೆಯಲ್ಲಿ ರಾಹುಲ್ ಗಾಂಧಿ: ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ, ಫೋಟೋ ವೈರಲ್

ಕೈಲಾಸ ಮಾನಸ ಸರೋವರ ಯಾತ್ರೆಗೆ ತೆರಳಿರುವ ರಾಹುಲ್ ಗಾಂಧಿಯವರು ಯಾತ್ರೆಯ ಕೆಲ ಫೋಟೋಗಳು ಹಾಗೂ ವಿಡಿಯೋಗಳನ್ನು ಹಂಚಿಕೊಂಡಿದ್ದು, ಈ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ...

ಕೈಲಾಸ ಯಾತ್ರೆಯಲ್ಲಿ ರಾಹುಲ್ ಗಾಂಧಿ: ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ, ಫೋಟೋ ವೈರಲ್
ಕೈಲಾಸ ಯಾತ್ರೆಯಲ್ಲಿ ರಾಹುಲ್ ಗಾಂಧಿ: ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ, ಫೋಟೋ ವೈರಲ್
Published On :
ಕಠ್ಮಂಡು: ಕೈಲಾಸ ಮಾನಸ ಸರೋವರ ಯಾತ್ರೆಗೆ ತೆರಳಿರುವ ರಾಹುಲ್ ಗಾಂಧಿಯವರು ಯಾತ್ರೆಯ ಕೆಲ ಫೋಟೋಗಳು ಹಾಗೂ ವಿಡಿಯೋಗಳನ್ನು ಹಂಚಿಕೊಂಡಿದ್ದು, ಈ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. 
ಫೋಟೋದಲ್ಲಿ ರಾಹುಲ್ ಗಾಂಧಿಯವರು ಜೀನ್ಸ್, ಜಾಕೆಟ್ಗಳು ಹಾಗೂ ಸ್ಪೋರ್ಟ್ಸ್ ಶೂನಲ್ಲಿ ಕಾಣಿಸಿಕೊಂಡಿದ್ದು, ಅಲ್ಲಿನ ಪ್ರವಾಸಿಗರ ಜೊತೆಗೆ ಸೆಲ್ಫೀ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. 
ರಾಹುಲ್ ಗಾಂಧಿಯವರ ಮಾನಸ ಯಾತ್ರೆಯನ್ನು ಪ್ರಶ್ನಿಸಿ ಕೆಲವರು ರಾಹುಲ್ ಅವರನ್ನು ಟ್ರೋಲ್ ಮಾಡಿದ್ದರು. ಮಾನಸ ಸರೋವರ ಯಾತ್ರೆ ಕೈಗೊಂಡಿರುವ ಕುರಿತಂತೆ ಕೆಲವರು ಅನುಮಾನಗಳನ್ನು ವ್ಯಕ್ತಪಡಿಸಿ ರಾಹುಲ್ ಅವರನ್ನು ಟ್ರೋಲ್ ಮಾಡಿದ್ದರು. 
ಇದೀಗ ಟ್ರೋಲ್ ಗಳಿಗೆ ಫೋಟೋಗಳ ಮೂಲಕವೇ ಉತ್ತರ ನೀಡಿರುವ ರಾಹುಲ್ ಗಾಂಧಿಯವರು, ಟೀಕಾಕಾರರ ಬಾಯಿ ಮುಚ್ಚಿಸಿದ್ದಾರೆ. 
ಮಾನಸ ಸರೋವರ ಯಾತ್ರೆ ಕುರಿತು ಫೋಟೋಗಳನ್ನು ಹಂಚಿಕೊಳ್ಳುವುದರೊಂದಿಗೆ ಟ್ವೀಟ್ ಮಾಡಿರುವ ರಾಹುಲ್ ಅವರು, ಕೈಲಾಸ ಪರ್ವತದ ವಿಡಿಯೋವನ್ನು ಹಂಚಿಕೊಂಡು 'ಶಿವನೇ ಬ್ರಹ್ಮಾಂಡ' ಎಂದು ಹೇಳಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.