ಸೂಪರ್ ಸ್ಟಾರ್ ರಜನಿಕಾಂತ್ ಬಿಜೆಪಿ ಜತೆ ವಿಲೀನಕ್ಕೆ ವೇದಿಕೆ ಸಿದ್ಧ?
ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಇತ್ತೀಚೆಗಷ್ಟೇ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದು ತಮ್ಮದೇ ಪಾರ್ಟಿ ಘೋಷಣೆ ಮಾಡುತ್ತಾರೆ ಅಂತ ಹೇಳಲಾಗಿತ್ತು...

Published On :
ಚೆನ್ನೈ: ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಇತ್ತೀಚೆಗಷ್ಟೇ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದು ತಮ್ಮದೇ ಪಾರ್ಟಿ ಘೋಷಣೆ ಮಾಡುತ್ತಾರೆ ಅಂತ ಹೇಳಲಾಗಿತ್ತು. ಆದರೆ ಇದೀಗ ತಲೈವಾ ದೆಹಲಿಯಲ್ಲಿ ಬಿಜೆಪಿ ವರಿಷ್ಠರ ಜೊತೆ ಸರಣಿ ಸಭೆ ನಡೆಸಿರುವುದು ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸಲು ಮಾಸ್ಟರ್ ಪ್ಲಾನ್ ಹೆಣೆಯುತ್ತಿದ್ದಾರೆ. ಆದರೆ ಉತ್ತರಭಾರತಕ್ಕೆ ಹೋಲಿಸಿದರೆ ದಕ್ಷಿಣ ಭಾರತದಲ್ಲಿ ಕರ್ನಾಟಕ ಹೊರತುಪಡಿಸಿದರೆ ಬೇರೆ ರಾಜ್ಯಗಳಲ್ಲಿ ಬಿಜೆಪಿ ಹವಾ ಅಷ್ಟಿಲ್ಲ. ಹೀಗಾಗಿಯೇ ಬಿಜೆಪಿ ಈ ಭಾಗದ ದಿಗ್ಗಜ ನಾಯಕರನ್ನು ಪಕ್ಷ ಸೆಳೆದು ದಕ್ಷಿಣ ಭಾರತದಲ್ಲಿ ಅಧಿಕಾರ ಹಿಡಿಯಲು ಪ್ಲಾನ್ ಮಾಡುತ್ತಿದೆ. ಇತ್ತೀಚೆಗಷ್ಟೇ ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಪ್ರಧಾನಿ ಮೋದಿ ಭೇಟಿ ನಂತರ ರಜನಿಕಾಂತ್ ದೆಹಲಿಯಲ್ಲಿ ಬಿಜೆಪಿ ನಾಯಕರ ಭೇಟಿ ಭಾರೀ ಚರ್ಚೆಗೆ ಕಾರಣವಾಗಿದೆ.
ದೆಹಲಿಯಲ್ಲಿ ಬೀಡು ಬಿಟ್ಟಿರುವ ರಜನಿಕಾಂತ್ ಅವರು ಅಮಿತ್ ಶಾ ಸೇರಿದಂತೆ ಹಲವು ನಾಯಕರ ಜೊತೆ ಸತತ 5 ದಿನದಲ್ಲಿ 7 ಸರಣಿ ಸಭೆ ನಡೆಸಿ ಮುಂದಿನ ರಾಜಕೀಯ ನಡೆ ಕುರಿತು ಚರ್ಚೆ ನಡೆಸಿದ್ದಾರೆ.
ರಜನಿಕಾಂತ್ ರಾಜಕೀಯ ಪ್ರವೇಶದ ಘೋಷಣೆ ಮಾಡಿದ್ದರು ಆದರೆ ಇನ್ನು ಪಕ್ಷ ಘೋಷಣೆ ಮಾಡಿಲ್ಲ. ಮುಂದಿನ ದಿನಗಳಲ್ಲಿ ರಜನಿಕಾಂತ್ ಪಾರ್ಟಿ ಘೋಷಣೆ ಮಾಡಿದರೂ, ಬಿಜೆಪಿ ಜೊತೆ ಪಕ್ಷ ವಿಲೀನಗೊಳಿಸಿ ತಮಿಳುನಾಡಿನಲ್ಲಿ ಅಧಿಕಾರ ಹಿಡಿಯಲು ಯೋಜನೆ ರೂಪಿಸುತ್ತಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


