ದೇಶ

ಉತ್ತರಾಖಂಡ್: ಕಂದಕಕ್ಕೆ ಉರುಳಿ ಬಿದ್ದ ಬಸ್, 5 ಸಾವು, 21 ಮಂದಿಗೆ ಗಾಯ

ಉತ್ತರಾಖಂಡ್ ರಾಜ್ಯದ ಅಲ್ಮೋರಾ ಜಿಲ್ಲೆಯ ಮಹನ್ರಿ ಎಂಬಲ್ಲಿ ಬಸ್ ವೊಂದು ಕಂದಕಕ್ಕೆ ಉರುಳಿ ಬಿದ್ದಿದ್ದು, ಪರಿಣಾಮ ಐವರು ಸಾವನ್ನಪ್ಪಿ, 21ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ...

ಉತ್ತರಾಖಂಡ್: ಕಂದಕಕ್ಕೆ ಉರುಳಿ ಬಿದ್ದ ಬಸ್, 5 ಸಾವು, 21 ಮಂದಿಗೆ ಗಾಯ
ಉತ್ತರಾಖಂಡ್: ಕಂದಕಕ್ಕೆ ಉರುಳಿ ಬಿದ್ದ ಬಸ್, 5 ಸಾವು, 21 ಮಂದಿಗೆ ಗಾಯ
Published On :
ಅಲ್ಮೋರಾ: ಉತ್ತರಾಖಂಡ್ ರಾಜ್ಯದ ಅಲ್ಮೋರಾ ಜಿಲ್ಲೆಯ ಮಹನ್ರಿ ಎಂಬಲ್ಲಿ ಬಸ್ ವೊಂದು ಕಂದಕಕ್ಕೆ ಉರುಳಿ ಬಿದ್ದಿದ್ದು, ಪರಿಣಾಮ ಐವರು ಸಾವನ್ನಪ್ಪಿ, 21ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ. 
ಅಲ್ಮೋರಾ ಜಿಲ್ಲೆಯ ಭಟ್ರೋಜ್ಖಾನ್-ಭಿಕಿಯಾಸನ್ ಮಾರ್ಗದಲ್ಲಿ ದುರ್ಘಟನೆ ಸಂಭವಿಸಿದೆ. 30 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಕಂದಕಕ್ಕೆ ಉರುಳಿಬಿದ್ದಿದೆ. 
ಗರ್ಹ್ವಾಲ್ ಮೋಟಾರ್ ಓನರ್ ಯೂನಿಯನ್'ಗೆ ಸೇರಿದ ಬಸ್ ರಾಮನಗರಿಂದ ಗೈರ್ಸಾನ್ ಎಂಬ ಪ್ರದೇಶಕ್ಕೆ ತೆರಳುತ್ತಿತ್ತು. ಈ ವೇಳೆ ಭಟ್ರೋಜ್ಖಾನ್-ಭಿಕಿಯಾಸನ್ ಮಾರ್ಗದ ಬಳಿ ಬರುತ್ತಿದ್ದಂತೆಯೇ ಬಸ್ ಮೇಲಿದ್ದ ನಿಯಂತ್ರಣವನ್ನು ಚಾಲಕ ಕಳೆದುಕೊಂಡಿದ್ದಾನೆ. ಈ ವೇಳೆ ಬಸ್ 50 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. 
ದುರ್ಘಟನೆ ಸಂಭವಿಸುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಹಿರಿಯ ಅಧಿಕಾರಿಗಳು, ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.