ಫೋಟೊದಲ್ಲಿ ನೆರಳೇ ಕಾಣುತ್ತಿಲ್ಲ: ಕೈಲಾಸ ಮಾನಸ ಸರೋವರ ಯಾತ್ರೆಯಲ್ಲಿರುವ ರಾಹುಲ್ ಕಾಲೆಳೆದ ಕೇಂದ್ರ ಸಚಿವ
ಕೈಲಾಸ ಮಾನಸ ಸರೋವರ ಯಾತ್ರೆ ಕೈಗೊಂಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಲವರು ಟ್ರೋಲ್ ಮಾಡುತ್ತಿದ್ದರೆ, ಕೇಂದ್ರ ಸಚಿವ ಗಿರಿರಾಜ್ ಸಿಂಗ್ ರಾಹುಲ್

Published On :
ಕೈಲಾಸ ಮಾನಸ ಸರೋವರ ಯಾತ್ರೆ ಕೈಗೊಂಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಲವರು ಟ್ರೋಲ್ ಮಾಡುತ್ತಿದ್ದರೆ, ಕೇಂದ್ರ ಸಚಿವ ಗಿರಿರಾಜ್ ಸಿಂಗ್ ರಾಹುಲ್ ಗಾಂಧಿಯ ಕಾಲೆಳೆದಿದ್ದಾರೆ.
ಫೋಟೋದಲ್ಲಿ ರಾಹುಲ್ ಗಾಂಧಿಯವರು ಜೀನ್ಸ್, ಜಾಕೆಟ್ಗಳು ಹಾಗೂ ಸ್ಪೋರ್ಟ್ಸ್ ಶೂನಲ್ಲಿ ಕಾಣಿಸಿಕೊಂಡಿದ್ದಾರೆ. ರಾಹುಲ್ ಗಾಂಧಿ ಫೋಟೋ ಬಗ್ಗೆ ಟ್ವೀಟ್ ಮಾಡಿರುವ ಗಿರಿರಾಜ್ ಸಿಂಗ್, ಇದು ಫೋಟೋ ಶಾಪ್ ಮಾಡಲಾಗಿರುವ ಫೋಟೊ, ಫೋಟೋದಲ್ಲಿ ನೆರಳು ಕಾಣಿಸುತ್ತಲೇ ಇಲ್ಲ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ಮಾನಸ ಸರೋವರ ಯಾತ್ರೆ ಕೈಗೊಂಡಿರುವ ಕುರಿತಂತೆ ಕೆಲವರು ಅನುಮಾನಗಳನ್ನು ವ್ಯಕ್ತಪಡಿಸಿ ರಾಹುಲ್ ಅವರನ್ನು ಟ್ರೋಲ್ ಮಾಡಿದ್ದರು. ಇದಕ್ಕೆ ಧ್ವನಿಗೂಡಿಸಿರುವ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಇದು ಫೋಟೋ ಶಾಪ್ ಇಮೇಜ್ ಎಂದು ಹೇಳಿದ್ದಾರೆ. ಆದರೆ ಮಾನಸ ಸರೋವರ ಯಾತ್ರೆ ಕುರಿತು ಫೋಟೋಗಳನ್ನು ಹಂಚಿಕೊಳ್ಳುವುದರೊಂದಿಗೆ ಟ್ವೀಟ್ ಮಾಡಿರುವ ರಾಹುಲ್ ಅವರು, ಕೈಲಾಸ ಪರ್ವತದ ವಿಡಿಯೋವನ್ನು ಹಂಚಿಕೊಂಡು 'ಶಿವನೇ ಬ್ರಹ್ಮಾಂಡ' ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Rahul Gandhiರಾಹುಲ್ ಗಾಂಧಿಫೋಟೋಶಾಪ್ಕೈಲಾಸ ಮಾನಸ ಸರೋವರ ಯಾತ್ರೆKailash yatra picturesPhotoshoppedBJP minister Giriraj Singhಸಚಿವ ಗಿರಿರಾಜ್ ಸಿಂಗ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


