ದೇಶ

ಏರೋ ಇಂಡಿಯಾ 2019 ಬೆಂಗಳೂರಿನಲ್ಲೇ ನಡೆಯಲಿದೆ: ಕೇಂದ್ರ ಸ್ಪಷ್ಟನೆ

ಕರ್ನಾಟಕ ರಾಜ್ಯದ ಪ್ರತಿಷ್ಠೆ ಎಂದೇ ಹೇಳಾಗುತ್ತಿದ್ದ 'ಏರೋ ಇಂಡಿಯಾ 2019'ನ್ನು ಬೆಂಗಳೂರಿನಲ್ಲಿಯೇ ನಡೆಸಲಾಗುತ್ತದೆ...

ಏರೋ ಇಂಡಿಯಾ 2019 ಬೆಂಗಳೂರಿನಲ್ಲೇ ನಡೆಯಲಿದೆ: ಕೇಂದ್ರ ಸ್ಪಷ್ಟನೆ
ಸಂಗ್ರಹ ಚಿತ್ರ
Published On :
ಬೆಂಗಳೂರು: ಕರ್ನಾಟಕ ರಾಜ್ಯದ ಪ್ರತಿಷ್ಠೆ ಎಂದೇ ಹೇಳಾಗುತ್ತಿರುವ 'ಏರೋ ಇಂಡಿಯಾ 2019'ನ್ನು ಬೆಂಗಳೂರಿನಲ್ಲಿಯೇ ನಡೆಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ಶನಿವಾರ ಸ್ಪಷ್ಟಪಡಿಸಿದೆ. 
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತೀವರ್ಷ ನಡೆಸಲಾಗುತ್ತಿದ್ದ ವೈಮಾನಿಕ ಪ್ರದರ್ಶನ ಏರೋ ಇಂಡಿಯಾವನ್ನು ಈ ಬಾರಿ ಉತ್ತರಪ್ರದೇಶದ ಲಖನೌಗೆ ಸ್ಥಳಾಂತರ ಮಾಡಲಾಗುತ್ತಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಇದಕ್ಕೆ ರಾಜ್ಯ ತೀವ್ರ ವಿರೋಧ ವ್ಯಕ್ತಪಡಿಸಿತ್ತು. 
ಇದಕ್ಕೆ ಇಂಬು ನೀಡುವಂತೆ ಇತ್ತೀಚೆಗಷ್ಟೇ ಬೆಂಗಳೂರಿಗೆ ಭೇಟಿ ನೀಡಿದ್ದ ರಕ್ಷಣಾ ಸಚಿವೆ ಸೀತಾರಾಮನ್ ಅವರು ಕೂಡ ಹೇಳಿಕೆಯನ್ನು ನೀಡಿದ್ದರು. ಏರೋ ಇಂಡಿಯಾ ಆಯೋಜಿಸಲು ಅವಕಾಶ ನೀಡುವಂತೆ ಸಾಕಷ್ಟು ರಾಜ್ಯಗಳು ಮನವಿ ಮಾಡಿಕೊಂಡಿವೆ. ಆದರೆ, ಈ ಬಗ್ಗೆ ಈ ವರೆಗೂ ದಿನಾಂಕಾವಾಗಲೀ ಅಥವಾ ಸ್ಥಳವನ್ನಾಗಲೀ ನಿರ್ಧರಿಸಿಲ್ಲ ಎಂದು ಹೇಳಿದ್ದರು. ಇದಕ್ಕೆ ರಾಜ್ಯದಾದ್ಯಂತ ತೀವ್ರ ವಿರೋಧಗಳು ಹಾಗೂ ಪ್ರತಿಭಟನೆಗಳು ನಡೆದಿದ್ದವು. 
ಈ ನಡುವಲ್ಲೇ ಇದೀಗ ಸ್ಪಷ್ಟನೆ ನೀಡಿರುವ ರಕ್ಷಣಾ ಸಚಿವಾಲಯ, ಏರೋ ಇಂಡಿಯಾ 2019ರ ವೈಮಾನಿಕ ಪ್ರದರ್ಶನ ಕಾರ್ಯಕ್ರಮ ಬೆಂಗಳೂರಿನಲ್ಲಿಯೇ ಮುಂಬರುವ ಫೆ.20-24ರಂದು ಆಯೋಜನೆ ಮಾಡಲು ನಿರ್ಧರಿಸಲಾಗಿದೆ. ಕಾರ್ಯಕ್ರಮ ಯಶಸ್ವಿಗೊಳಿಸಲು ಹಾಗೂ ಪರಿಣಾಮಕಾರಿಯಾಗಿ ಪ್ರದರ್ಶನಗೊಳಿಸಲು ರಕ್ಷಣಾ ಇಲಾಖೆ ಬದ್ಧವಾಗಿದೆ ಎಂದು ಹೇಳಿದೆ. 
5 ದಿನಗಳ ಕಾಲ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮಕ್ಕೆ ಸಾಕಷ್ಟು ಜಾಗತಿಕ ನಾಯಕರು ಹಾಗೂ ವಿಮಾನಯಾನ ಅಂತರಿಕ್ಷಯಾನ ಉದ್ಯಮದ ಹಲವಾರು ಹೂಡಿಕೆದಾರರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ವಿಶ್ವದ ಹಲವು ಚಿಂತಕರೂ ಕೂಡ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ದೇಶೀಯ ವಾಯುಯಾನ ಉದ್ಯಮದ ಜೊತೆ ಜೊತೆಗೆ ಮೇಕ್ ಇನ್ ಇಂಡಿಯಾ ಉತ್ತೇಚಿಸುವ ಕಾರ್ಯಗಳೂ ಕೂಡ ನಡೆಯಲಿವೆ ಎಂದು ತಿಳಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.