ಆರ್ಟಿಕಲ್ 35ಎ: ವಿಧಾನಸಭಾ, ಲೋಕಸಭಾ ಚುನಾವಣೆ ಬಹಿಷ್ಕರಿಸುವುದಾಗಿ ಎನ್ ಸಿ ಬೆದರಿಕೆ
ಆರ್ಟಿಕಲ್ 35ಎ ನ್ನು ರಕ್ಷಿಸಲು ಕೇಂದ್ರ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳದೇ ಇದ್ದಲ್ಲಿ ಲೋಕಸಭೆ, ವಿಧಾನಸಭೆ ಚುನಾವಣೆಗಳನ್ನು ಬಹಿಷ್ಕರಿಸುವುದಾಗಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಬೆದರಿಕೆ ಹಾಕಿದೆ.

Published On :
ಶ್ರೀನಗರ: ಜಮ್ಮು-ಕಾಶ್ಮೀರದ ಜನತೆಗೆ ವಿಶೇಷ ಸವಲತ್ತುಗಳನ್ನು, ಹಕ್ಕುಗಳನ್ನು ನೀಡುವ ಆರ್ಟಿಕಲ್ 35ಎ ನ್ನು ರಕ್ಷಿಸಲು ಕೇಂದ್ರ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳದೇ ಇದ್ದಲ್ಲಿ ಲೋಕಸಭೆ, ವಿಧಾನಸಭೆ ಚುನಾವಣೆಗಳನ್ನು ಬಹಿಷ್ಕರಿಸುವುದಾಗಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಬೆದರಿಕೆ ಹಾಕಿದೆ.
ಆರ್ಟಿಕಲ್ 35ಎ ಅಡಿಯಲ್ಲಿ ಜಮ್ಮು-ಕಾಶ್ಮೀರದ ಸ್ಥಳೀಯ ಜನತೆಗೆ ವಿಶೇಷ ಸವಲತ್ತುಗಳನ್ನು ನೀಡಲಾಗಿದ್ದು, ಹೊರ ರಾಜ್ಯಗಳಿಂದ ಯಾರೂ ಸಹ ಜಮ್ಮು-ಕಾಶ್ಮೀರದಲ್ಲಿ ಆಸ್ತಿಗಳನ್ನು ಖರೀದಿಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ. ಆದರೆ ಈ ಆರ್ಟಿಕಲ್ 35 ಎ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಲಾಗಿದ್ದು, ಆರ್ಟಿಕಲ್ ನ್ನು ರದ್ದುಗೊಳಿಸಬೇಕೆಂದು ಮನವಿ ಮಾಡಲಾಗಿದೆ.
ಒಂದು ವೇಳೆ ಕೇಂದ್ರ ಸರ್ಕಾರವೇನಾದರೂ ಆರ್ಟಿಕಲ್ 35ಎನ್ನು ದುರ್ಬಲಗೊಳಿಸುವುದಕ್ಕೆ ಚಿಂತಿಸಿದರೆ ನಾವು ನಮ್ಮ ದಾರಿ ನೋಡಿಕೊಳ್ಳಬೇಕಾಗುತ್ತದೆ. ವಿಧಾನಸಭಾ, ಲೋಕಸಭಾ ಚುನಾವಣೆ ಬಹಿಷ್ಕರಿಸುತ್ತೇವೆ, ಯಾವುದಕ್ಕೂ ಅವಕಾಶ ನೀಡುವುದಿಲ್ಲ ಎಂದು ಜಮ್ಮು-ಕಾಶ್ಮೀರ ಮಾಜಿ ಸಿಎಂ ಎನ್ ಸಿ ನಾಯಕ ಫಾರೂಕ್ ಅಬ್ದುಲ್ಲಾ ಎಚ್ಚರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
National Conferenceನ್ಯಾಷನಲ್ ಕಾನ್ಫರೆನ್ಸ್ಲೋಕಸಭಾ ಚುನಾವಣೆLok Sabha electionsArticle 35Aಆರ್ಟಿಕಲ್ 35ಎBoycott assemblyವಿಧಾನಸಭಾ ಚುನಾವಣೆ ಬಹಿಷ್ಕಾರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


