ಪ್ರಧಾನಿ ಮೋದಿ ಸರ್ಕಾರದ ವೈಫಲ್ಯಗಳ ಬಗ್ಗೆ ವಾಗ್ದಾಳಿ: ಮೌನ ಮೀರಿದ ಮನ್‌ಮೋಹನ್ ಸಿಂಗ್
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ವೈಫಲ್ಯಗಳ ಕುರಿತು ಮಾಜಿ ಪ್ರಧಾನಿ ಮನ್‌ಮೋಹನ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ...

Published On :
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ವೈಫಲ್ಯಗಳ ಕುರಿತು ಮಾಜಿ ಪ್ರಧಾನಿ ಮನ್‌ಮೋಹನ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.
ಕಪ್ಪುಹಣ, ನೋಟ್ ಬ್ಯಾನ್ ಹಾಗೂ ದೇಶದ ಯುವ ಜನತೆಗೆ ಉದ್ಯೋಗ ಸೃಷ್ಟಿಸುವಲ್ಲಿ ಮೋದಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಮನ್‌ಮೋಹನ್ ಸಿಂಗ್ ಟೀಕಿಸಿದರು.
ನವದೆಹಲಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮನ್‌ಮೋಹನ್ ಸಿಂಗ್ ಅವರು, ದೇಶದಲ್ಲಿ ಏಕಾಏಕಿಯಾಗಿ ಜಿಎಸ್ ಟಿ ಜಾರಿಗೊಳಿಸಿದ್ದರಿಂದ ಅನೇಕ ಉದ್ಯಮಿಗಳು ದಿವಾಳಿಯಾಗಿರುವ ಜತೆಗೆ ಉದ್ಯಮದ ಮೇಲೆ ಕೆಟ್ಟ ಪರಿಣಾಮ ಬೀರಿತು. ಇದರಿಂದ ನಿರುದ್ಯೋಗ ಸಹ ಸೃಷ್ಟಿಯಾಯಿತು ಎಂದರು.
ಪ್ರಧಾನಿ ಮೋದಿ ಅವರು ಈ ಹಿಂದೆ 2 ಕೋಟಿ ಉದ್ಯೋಗ ನೀಡುವ ಭರವಸೆ ನೀಡಿದ್ದು ದೇಶದ ಯುವಕರು ಅದಕ್ಕಾಗಿ ಕಾಯುತ್ತಾ ಕುಳಿತಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


