ರಾಫೆಲ್ ಡೀಲ್; ನಿರ್ದಿಷ್ಟ ಸುಧಾರಣೆಗಳ ಬಗ್ಗೆ ಮೋದಿ ಸರ್ಕಾರ ಸುಳ್ಳು ಹೇಳಿದೆ: ಕಾಂಗ್ರೆಸ್
41 ಸಾವಿರ ಕೋಟಿ ರುಪಾಯಿ ಮೌಲ್ಯದ ರಾಫೆಲ್ ಡೀಲ್ ನಲ್ಲಿ ಭಾರತ ನಿರ್ದಿಷ್ಟ ಸುಧಾರಣೆಗಳನ್ನು ಮಾಡಿದೆ...

Published On :
ಚಂಡೀಗಢ: 41 ಸಾವಿರ ಕೋಟಿ ರುಪಾಯಿ ಮೌಲ್ಯದ ರಾಫೆಲ್ ಡೀಲ್ ನಲ್ಲಿ ಭಾರತ ನಿರ್ದಿಷ್ಟ ಸುಧಾರಣೆಗಳನ್ನು ಮಾಡಿದೆ ಎಂದು ನರೇಂದ್ರ ಮೋದಿ ಸರ್ಕಾರ ಸುಳ್ಳು ಹೇಳುತ್ತಿರುವುದಾಗಿ ಕಾಂಗ್ರೆಸ್ ಶನಿವಾರ ಆರೋಪಿಸಿದೆ.
ಭಾರತದ ನಿರ್ದಿಷ್ಟ ಸುಧಾರಣೆಗಳು ಎನ್ ಡಿಎ ಡೀಲ್ ಮತ್ತು ಯುಪಿಎ ಡೀಲ್ ಎರಡರಲ್ಲೂ ಒಂದೇ ಆಗಿದ್ದು, ಈ ಬಗ್ಗೆ ಪ್ರಧಾನಿ ಮೋದಿ ಹಾಗೂ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸ್ಪಷ್ಟನೆ ನೀಡಬೇಕು ಎಂದು ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೇವಾಲ ಅವರು ಒತ್ತಾಯಿಸಿದ್ದಾರೆ.
ಪ್ರತಿ ಯುದ್ಧ ವಿಮಾನದ ಸುಧಾರಣೆಯ ದರದ ಬಗ್ಗೆ ಪ್ರಧಾನಿ ಮೋದಿ ಮತ್ತು ರಕ್ಷಣಾ ಸಚಿವರು ಸುಳ್ಳು ಹೇಳುತ್ತಿದ್ದಾರೆ. ಪ್ರತಿ ವಿಮಾನಕ್ಕೆ 526 ಕೋಟಿ ರುಪಾಯಿ ಇದ್ದ ಬೆಲೆ 1670 ಕೋಟಿ ರುಪಾಯಿ ಏರಿಕೆಯಾಗಿದ್ದು ಹೇಗೆ? ಎಂದು ಸುರ್ವೇವಾಲ ಅವರು ಪ್ರಶ್ನಿಸಿದ್ದಾರೆ.
ರಾಫೆಲ್ ಡೀಲ್ ನಿಂದಾಗಿ ಸಾರ್ವಜನಿಕರ 41 ಸಾವಿರ ಕೋಟಿ ರುಪಾಯಿ ನಷ್ಟವಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ದೂರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


