ದೇಶ

ಪ್ರಧಾನಿ ಮೋದಿ ನಾಯಕತ್ವದ ಅಡಿಯಲ್ಲಿ ಭಾರತ ದುರಂತದತ್ತ ಸಾಗುತ್ತಿದೆ: ಮಲ್ಲಿಕಾರ್ಜುನ ಖರ್ಗೆ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಾಯಕತ್ವದ ಅಡಿಯಲ್ಲಿ ಭಾರತ ದುರಂತದತ್ತ ಸಾಗುತ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜು ಖರ್ಗೆಯವರು ಶನಿವಾರ ಹೇಳಿದ್ದಾರೆ...

ಪ್ರಧಾನಿ ಮೋದಿ ನಾಯಕತ್ವದ ಅಡಿಯಲ್ಲಿ ಭಾರತ ದುರಂತದತ್ತ ಸಾಗುತ್ತಿದೆ: ಮಲ್ಲಿಕಾರ್ಜುನ ಖರ್ಗೆ
ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜು ಖರ್ಗೆ
Published On :
ಮುಂಬೈ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಾಯಕತ್ವದ ಅಡಿಯಲ್ಲಿ ಭಾರತ ದುರಂತದತ್ತ ಸಾಗುತ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜು ಖರ್ಗೆಯವರು ಶನಿವಾರ ಹೇಳಿದ್ದಾರೆ. 
ಪುಣೆಯಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿರುವ ಅವರು, ಸಬ್ಸಿಡಿ ನೀಡುವ ಮೂಲಕ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ನಾವು ನಿಯಂತ್ರಿಸಿದ್ದೆವು. ಆದರೆ, ಬಿಜೆಪಿ ದೇಶದ ಸಾಮಾನ್ಯ ಜನರ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ. ನೋಟು ನಿಷೇಧ ನಿರ್ಧಾರ ಕೈಗೊಂಡಾಗಲೂ ಸಾಮಾನ್ಯ ಜನರನ್ನು ತಿರಸ್ಕರಿಸಿದ್ದರು. ಆರ್ಥಿಕ ವ್ಯವಸ್ಥೆಯಲ್ಲಿ ಮೋದಿ ಸರ್ಕಾರ ವಿಫಲಗೊಂಡಿದೆ ಎಂದು ಹೇಳಿದ್ದಾರೆ. 
ಬಿಜೆಪಿ ಚುನಾವಣಾ ಯಂತ್ರವಾಗಿ ಮಾರ್ಪಟ್ಟಿದೆ. ಈ ವರೆಗೂ ಯಾವುದೇ ಭರವಸೆಗಳನ್ನೂ ಈಡೇರಿಸಿಲ್ಲ. ಹಲವು ಹೆಸರಿನೊಂದಿಗೆ ಮೋದಿ ಕೇವಲ ಯೋಜನೆಗಳನ್ನಷ್ಟೇ ತಂದರು. ಆದರೆ, ಸೂಕ್ತ ರೀತಿಯಲ್ಲಿ ಅವುಗಳನ್ನು ಜಾರಿಗೆ ತರಲಿಲ್ಲ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.