ಅಜ್ಜಿ ಅಂತ್ಯಕ್ರಿಯೆ ಬಳಿಕ ಏನಾಯ್ತೋ; ಒಂದೇ ಕುಣಿಕೆಯಲ್ಲಿ ಅಮ್ಮ-ಮಗ ಆತ್ಮಹತ್ಯೆ!
ಅಜ್ಜಿಯ ಅಂತ್ಯಕ್ರಿಯೆ ಮುಗಿಸಿ ಮನೆಗೆ ಬಿದ್ದಿದ್ದ ಮೊಮ್ಮಗ ಹಾಗೂ ಆತನ ತಾಯಿ ಒಂದೇ ಕುಣಿಕೆಯಲ್ಲಿ ನೇಣಿಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ...

Published On :
ಅಮರಾವತಿ(ಮಹಾರಾಷ್ಟ್ರ): ಅಜ್ಜಿಯ ಅಂತ್ಯಕ್ರಿಯೆ ಮುಗಿಸಿ ಮನೆಗೆ ಬಿದ್ದಿದ್ದ ಮೊಮ್ಮಗ ಹಾಗೂ ಆತನ ತಾಯಿ ಒಂದೇ ಕುಣಿಕೆಯಲ್ಲಿ ನೇಣಿಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಮೃತರನ್ನು 32 ವರ್ಷದ ರೂಪೇಶ್ ಬಾಲಕೃಷ್ಣ ಹಾಗೂ ಆತನ ತಾಯಿ 70 ವರ್ಷದ ಶಶಿಕಲಾ ಫುಸ್ಸೆ ಎಂದು ಗುರುತಿಸಲಾಗಿದ್ದು ಆತ್ಮಹತ್ಯೆಗೆ ಕಾರಣವೇನೆಂದು ತಿಳಿದುಬಂದಿಲ್ಲ.
ರೂಪೇಶ್ ಮುಂಬೈನ ಎಲೆಕ್ಟ್ರಾನಿಕ್ ಬೋರ್ಡ್ ನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ಅಜ್ಜಿಯ ಅಂತ್ಯಕ್ರಿಯೆ ಮುಗಿಸಿ ಮನೆಗೆ ಬಂದಿದ್ದರು. ಆ ಬಳಿಕ ತಾಯಿ ಮಗ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸಂಬಂಧಿಕರು ಮನೆಗೆ ಬಂದು ನೋಡಿದಾಗ ತಾಯಿ-ಮಗ ಆತ್ಮಹತ್ಯೆಗೆ ಶರಣಾಗಿರುವುದು ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇನ್ನು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


