ರಾಜೀವ್ ಗಾಂಧಿ ಹಂತಕರ ಬಿಡುಗಡೆಗೆ ತಮಿಳುನಾಡು ಸಚಿವ ಸಂಪುಟ ನಿರ್ಧಾರ
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡುವಂತೆ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್...

Published On :
ಚೆನ್ನೈ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡುವಂತೆ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಅವರಿಗೆ ಶಿಫಾರಸು ಮಾಡಲು ತಮಿಳುನಾಡು ಸಚಿವ ಸಂಪುಟ ಭಾನುವಾರ ನಿರ್ಧರಿಸಿದೆ.
ಇಂದು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಮೀನುಗಾರಿಕೆ ಸಚಿವ ಡಿ ಜಯಕುಮಾರ್ ಅವರು ವರದಿಗಾರರಿಗೆ ತಿಳಿಸಿದ್ದಾರೆ.
ಸಂವಿಧಾನದ 161ನೇ ವಿಧಿಯನ್ವಯ ಎಲ್ಲಾ ಏಳು ಹಂತಕರನ್ನು ಬಿಡುಗಡೆ ಮಾಡುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಜೀವಾವಧಿ ಶಿಕ್ಷೆಗೆ ಗುರಿಯಾಗಿ ಕಳೆದ 27 ವರ್ಷಗಳಿಂದ ಜೈಲಿನಲ್ಲಿರುವ ರಾಜೀವ್ ಗಾಂಧಿ ಹಂತಕರಾದ ನಳಿನಿ ಶ್ರೀಹರಿಹರನ್, ಮುರುಗನ್, ಪೆರಾರಿವಾಲನ್, ರಾಬರ್ಟ್ ಪಯಾಸ್, ರವಿಚಂದ್ರನ್, ಸಂತಾನ್, ಜಯಕುಮಾರ್ ಅವರನ್ನು ಬಿಡುಗಡೆ ಮಾಡಲು ತಮಿಳುನಾಡು ಸರ್ಕಾರ ನಿರ್ಧರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
releaseಬಿಡುಗಡೆರಾಜೀವ್ ಗಾಂಧಿ ಹಂತಕರುTamil Nadu cabinetRajiv Gandhi assasination case convictsತಮಿಳುನಾಡು ಸಂಪುಟ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


