ಆಂಧ್ರಪ್ರದೇಶ: ಪೆಟ್ರೋಲ್-ಡೀಸೆಲ್ ಮೇಲಿನ ವ್ಯಾಟ್ ಕಡಿತ; 2 ರೂ. ಇಳಿಕೆ
ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ದೇಶದಾದ್ಯಂತ ಭಾರತ್ ಬಂದ್ ಆಚರಿಸಲಾಗುತ್ತಿದ್ದು, ಈ ನಡುವಲ್ಲೇ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತನ್ನ ಪಾಲಿನ ವ್ಯಾಟ್'ನ್ನು ಕಡಿತಗೊಳಿಸುವುದಾಗಿ ಆಂಧ್ರಪ್ರದೇಶ ಸರ್ಕಾರ ಘೋಷಣೆ ಮಾಡಿದೆ...

Published On :
ಅಮರಾವತಿ: ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ದೇಶದಾದ್ಯಂತ ಭಾರತ್ ಬಂದ್ ಆಚರಿಸಲಾಗುತ್ತಿದ್ದು, ಈ ನಡುವಲ್ಲೇ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತನ್ನ ಪಾಲಿನ ವ್ಯಾಟ್'ನ್ನು ಕಡಿತಗೊಳಿಸುವುದಾಗಿ ಆಂಧ್ರಪ್ರದೇಶ ಸರ್ಕಾರ ಘೋಷಣೆ ಮಾಡಿದೆ.
ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಬೆಲೆಯನ್ನು ರೂ.2 ಕಡತಗೊಳಿಸುವುದಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಘೋಷಣೆ ಮಾಡಿದ್ದಾರೆ.
ಪರಿಷ್ಕೃತ ತರ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ ಎಂದು ಚಂದ್ರಬಾಬು ನಾಯ್ಡು ಅವರು ತಿಳಿಸಿದ್ದಾರೆ.
ಈ ಹಿಂದೆ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಅವರು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ರಾಜ್ಯದ ಶೇ.4 ರಷ್ಟು ವ್ಯಾಟ್'ನ್ನು ಕಡಿತಗೊಳಿಸುವುದಾಗಿ ತಿಳಿಸಿದ್ದರು. ಇದರಿಂದ ತೈಲ ಬೆಲೆ ಪ್ರತೀ ಲೀಟರ್'ಗೆ ರೂ.2.50 ಕಡಿತಗೊಳ್ಳಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Andhra PradeshPriceಬೆಲೆreductionಆಂಧ್ರಪ್ರದೇಶChandrababu Naiduಚಂದ್ರಬಾಬು ನಾಯ್ಡುPetrol dieselಬೆಲೆ ಕಡಿತಪೆಟ್ರೋಲ್ ಡೀಸೆಲ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


