ಸಕ್ರಿಯ ರಾಜಕೀಯಕ್ಕೆ ಸೇರಲ್ಲ, ಯಾವುದೇ ಪಕ್ಷದ ಪರ ಪ್ರಚಾರವಿಲ್ಲ: ಪ್ರಶಾಂತ್ ಕಿಶೋರ್
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯಾವ ಪಕ್ಷದ ಪರವೂ ವಯಕ್ತಿಕವಾಗಿ ಪ್ರಚಾರ ನಡೆಸುವುದಿಲ್ಲ ಎಂದೂ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ...

Published On :
ಹೈದರಾಬಾದ್: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯಾವ ಪಕ್ಷದ ಪರವೂ ವಯಕ್ತಿಕವಾಗಿ ಪ್ರಚಾರ ನಡೆಸುವುದಿಲ್ಲ ಎಂದೂ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೇಳಿದ್ದಾರೆ.
ಸದ್ಯ ತಮ್ಮದೇ ಸ್ವಂತ ಉದ್ಯಮ ನಡೆಸುತ್ತಿರುವ ಪ್ರಶಾಂತ್ ಕಿಶೋರ್ ಮೊದಲ ಬಾರಿಗೆ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. 2019 ರ ಲೋಕಸಭೆ ಚುನಾವಣೆಯಲ್ಲಿ ಯಾವುದೇ ಒಂದು ಪಕ್ಷದ ಪರ ಗುರುತಿಸಿಕೊಳ್ಳುವುದಿಲ್ಲ ನನ್ನ ಮತ್ತು ಭಾರತೀಯ ರಾಜಕೀಯ ನೀತಿ ಸಮಿತಿ ನಡುವೆ ವ್ಯತ್ಯಾಸವಿದೆ ಎಂದು ಹೇಳಿದ್ದಾರೆ.
ಐ ಪ್ಯಾಕ್ ಸಂಸ್ಥಾಪಕ ಕಿಶೋರ್, ಕಳೆದ ಎರಡು ವರ್ಷಗಳಿಂದ ನಾನು ಇದರಿಂದ ಹೊರಬರಲು ಪ್ರಯತ್ನಿಸುತ್ತಿದ್ದೇನೆ, ಈ ಹುದ್ದೆಯಿಂದ ನಾನು ನಿರ್ಗಮಿಸುತ್ತೇನೆ ಎಂದು ಹೇಳಿದ್ದೆ ಎಂದು ತಿಳಿಸಿದ್ದಾರೆ. ಹಲವು ಪಕ್ಷಗಳ ಪರ ಚುನಾವಣಾ ಕಾರ್ಯ ತಂತ್ರರೂಪಿಸಿದ್ದಾರೆ,
2012 ರಲ್ಲಿ ಗುಜರಾತ್ ವಿಧಾನಸಭೆ ಚುನಾವಣೆ ವೇಳೆ ಹಾಗೂ 2014 ರ ಲೋಕಸಭೆ ಚುನಾವಣೆಯಲ್ಲಿ ಮೋದಿ ಪರ ಕೆಲಸ ಮಾಡಿದ್ದಾರೆ, ಸದ್ಯ ಆಂಧ್ರ ಪ್ರದೇಶದ ವಿಧಾನ ಸಭೆ ಚುನಾವಣೆಯಲ್ಲಿ ವೈಎಸ್ ಆರ್ ಸಿಪಿ ಪರ ಕೆಲಸ ಮಾಡುತ್ತಿದ್ದಾರೆ, ಒಂದು ವೇಳೆ ನಾನು ರಾಜಕೀಯಕ್ಕೆ ಬಂದರೇ ಪಿಎಂ ನರೇಂದ್ರ ಮೋದಿ ನನ್ನನ್ನು ಹೆಚ್ಚು ಸ್ವಾಗತಿಸುತ್ತಾರೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Prashant Kishorಸಕ್ರಿಯ ರಾಜಕಾರಣ2019 Lok Sabha election2019ರ ಲೋಕಸಭೆ ಚುನಾವಣೆactive politics. ಪ್ರಶಾಂತ್ ಕಿಶೋರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


