2007 ರ ಹೈದರಾಬಾದ್ ಅವಳಿ ಸ್ಫೋಟ: ಇಬ್ಬರಿಗೆ ಗಲ್ಲು, ಒಬ್ಬನಿಗೆ ಜೀವಾವಧಿ ಶಿಕ್ಷೆ
ಹೈದರಾಬಾದ್ ಅವಳಿ ಸ್ಫೋಟ ಪ್ರಕರಣದಲ್ಲಿ, ನಿಷೇಧಿತ ಉಗ್ರ ಸಂಘಟನೆಯ ಇಬ್ಬರು ಉಗ್ರರಿಗೆ ಕೋರ್ಟ್ ಮರಣದಂಡನೆ ವಿಧಿಸಿದೆ.

Published On :
ಹೈದರಾಬಾದ್: ಹೈದರಾಬಾದ್ ಅವಳಿ ಸ್ಫೋಟ ಪ್ರಕರಣದಲ್ಲಿ, ನಿಷೇಧಿತ ಉಗ್ರ ಸಂಘಟನೆಯ ಇಬ್ಬರು ಉಗ್ರರಿಗೆ ಕೋರ್ಟ್ ಮರಣದಂಡನೆ ವಿಧಿಸಿದೆ.
ದಿಲ್ ಸುಖ್ ನಗರದ ಸ್ಫೋಟ ಪ್ರಕರಣದ ಅಪರಾಧಿಗಳಾದ ಅನೀಕ್ ಶಫೀಕ್ ಸಯೀದ್ ಹಾಗೂ ಅಕ್ಬರ್ ಇಸ್ಮೈಲ್ ಚೌಧರಿಗೆ ವಿಶೇಷ ನ್ಯಾಯಲಯ ಮರಣ ದಂಡನೆ ವಿಧಿಸಿದೆ. ಮತ್ತೋರ್ವ ಅಪರಾಧಿ ಮೊಹಮ್ಮದ್ ತರೀಕ್ ಅಂಜುಮ್ ಅಹ್ಸಾನ್ ಗೆ ಜೀವಾವಧಿ ಶಿಕ್ಷೆ ನೀಡಲಾಗಿದೆ. ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಅಪರಾಧಿ ಉಗ್ರರಿಗೆ ಆಶ್ರಯ ನೀಡಿದ್ದ. 2007 ರ ಆಗಸ್ಟ್ ನಲ್ಲಿ ಹೈದರಾಬಾದ್ ನಗೋಕುಲ್ ಚಾಟ್ ಭಂಡಾರ್ ಹಾಗೂ ಲುಂಬಿನಿ ಪಾರ್ಕ್ ನಲ್ಲಿ ನಡೆದಿದ್ದ ಸ್ಫೋಟದಲ್ಲಿ 43 ಜನ ಮೃತಪಟ್ಟಿದ್ದರು, 70 ಜನ ಗಾಯಗೊಂಡಿದ್ದರು.
ಹೈದರಾಬಾದ್ ವಿಶೇಷ ನ್ಯಾಯಲಯದ ತೀರ್ಪನ್ನು ಪ್ರಶ್ನಿಸಿ ಅಪರಾಧಿಗಳು ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


