ದೇಶ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಆದಾಯ ತೆರಿಗೆ ನೋಟಿಸ್ ವಿರುದ್ಧ ಸೋನಿಯಾ, ರಾಹುಲ್ ಮೇಲ್ಮನವಿ ಅರ್ಜಿ ತಿರಸ್ಕೃತ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಉರುಳಾಗಿರುವ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಆದಾಯ ತೆರಿಗೆ ಇಲಾಖೆ ನೋಟಿಸ್ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿ ತಿರಸ್ಕೃತಗೊಂಡಿದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಆದಾಯ ತೆರಿಗೆ ನೋಟಿಸ್ ವಿರುದ್ಧ ಸೋನಿಯಾ, ರಾಹುಲ್ ಮೇಲ್ಮನವಿ ಅರ್ಜಿ ತಿರಸ್ಕೃತ
ನ್ಯಾಷನಲ್ ಹೆರಾಲ್ಡ್ ಪ್ರಕರಣ: ಆದಾಯ ತೆರಿಗೆ ಇಲಾಖೆ ನೋಟಿಸ್ ವಿರುದ್ಧದ ಸೋನಿಯಾ, ರಾಹುಲ್ ಅರ್ಜಿ ತಿರಸ್ಕೃತ
Published On :
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಉರುಳಾಗಿರುವ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಆದಾಯ ತೆರಿಗೆ ಇಲಾಖೆ ನೋಟಿಸ್ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿ ತಿರಸ್ಕೃತಗೊಂಡಿದೆ. 
ದೆಹಲಿ ಕೋರ್ಟ್ ಸೆ.10 ರಂದು ಅರ್ಜಿಯನ್ನು ತಿರಸ್ಕರಿಸಿದೆ. 2011-12 ನೇ ಸಾಲಿನ ಆರ್ಥಿಕ ವರ್ಷದ ದಾಖಲೆಗಳನ್ನು ಮರುಪರಿಶೀಲನೆಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ಜಾರಿಗೊಳಿಸಿತ್ತು. ಈ ನೋಟಿಸ್ ನ್ನು ಪ್ರಶ್ನಿಸಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಕೋರ್ಟ್ ಮೆಟ್ಟಿಲೇರಿದ್ದರು. 
2011-12 ನೇ ಸಾಲಿನ ಆರ್ಥಿಕ ವರ್ಷದಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಯಂಗ್ ಇಂಡಿಯನ್ ಪ್ರೈ.ಲಿ ಮೂಲಕ ಗಳಿಸಿರುವ ಆದಾಯದ ಕುರಿತ ವಿವರಗಳನ್ನು ಸಲ್ಲಿಕೆ ಮಾಡಿಲ್ಲ ಎಂಬ ಆರೋಪವಿದ್ದು ಈ ಬಗ್ಗೆ ತಮ್ಮ ಬಳಿ ಸೂಕ್ತ ದಾಖಲೆಗಳೂ ಇವೆ ಎಂದು ಆದಾಯ ತೆರಿಗೆ ಇಲಾಖೆ ವಾದಿಸಿತ್ತು. ರಾಹುಲ್ ಗಾಂಧಿ ಸೋನಿಯಾ ಗಾಂಧಿ ಅವರ ಪ್ರಮುಖ ಪಾಲುದಾರಿಕೆಯನ್ನು ಹೊಂದಿರುವ  ಯಂಗ್ ಇಂಡಿಯನ್ ಪ್ರೈ.ಲಿ, ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಪ್ರಕಟಿಸುತ್ತಿದ್ದ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್(ಎಜೆಎಲ್)ನ್ನೂ ಸ್ವಾಧೀನಪಡಿಸಿಕೊಂಡಿತ್ತು. ಈ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಬಿಜೆಪಿ ನಾಯಕ ಸುಬ್ರಹ್ಮಣಿಯನ್ ಸ್ವಾಮಿ ಇಬ್ಬರೂ ಕಾಂಗ್ರೆಸ್ ನಾಯಕರ ವಿರುದ್ಧ ಕೋರ್ಟ್ ನಲ್ಲಿ ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.