ಭಾರತ್ ಬಂದ್: ವಿಪಕ್ಷಗಳ ಒಗ್ಗಟ್ಟು ನಮ್ಮ ಶಕ್ತಿ ಹಾಗೂ ಪ್ರಧಾನಿ ಮೋದಿ ದುರ್ಬಲತೆ ತೋರಿಸುತ್ತದೆ- ಕಾಂಗ್ರೆಸ್
ವಿರೋಧ ಪಕ್ಷಗಳ ಒಗ್ಗಟ್ಟು ನಮ್ಮಲ್ಲಿರುವ ಶಕ್ತಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದುರ್ಬಲತೆಯನ್ನು ತೋರಿಸುತ್ತಿದೆ ಎಂದು ಕಾಂಗ್ರೆಸ್ ಸೋಮವಾರ ಹೇಳಿದೆ...

Published On :
ನವದೆಹಲಿ: ವಿರೋಧ ಪಕ್ಷಗಳ ಒಗ್ಗಟ್ಟು ನಮ್ಮಲ್ಲಿರುವ ಶಕ್ತಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದುರ್ಬಲತೆಯನ್ನು ತೋರಿಸುತ್ತಿದೆ ಎಂದು ಕಾಂಗ್ರೆಸ್ ಸೋಮವಾರ ಹೇಳಿದೆ.
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮತ್ತು ಡಾಲರ್ ಎದುರು ರುಪಾಯಿ ಮೌಲ್ಯ ಕುಸಿತ ಕಂಡಿರುವ ಹಿನ್ನಲೆಯಲ್ಲಿ ಇದನ್ನು ಖಂಡಿಸಿ ಕಾಂಗ್ರೆಸ್ ನೇತೃತ್ವದಲ್ಲಿ ಭಾರತ್ ಬಂದ್ ಆಚರಿಸಲಾಗುತ್ತಿದ್ದು, ಕಾಂಗ್ರೆಸ್ ಜೊತೆಗೆ ವಿರೋಧ ಪಕ್ಷಗಳು ಕೈಜೋಡಿಸಿವೆ.
ಭಾರತ್ ಬಂದ್ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕಿ ಮೀರಾ ಕುಮಾರ್ ಅವರು, ಭಾರತ್ ಬಂದ್ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅವರ ನಾಯಕತ್ವದ ಮೇಲೆ ಖಂಡಿತವಾಗಿಯೂ ಪರಿಣಾಮ ಬೀರಲಿದೆ. ಇದಲ್ಲದೆ, ಪ್ರತಿಭಟನೆ ಭಾರತದ ಜನತೆಯ ಮೇಲೆಯೂ ಪರಿಣಾಮ ಬೀರಲಿದೆ. ಏಕೆಂದರೆ, ಸರ್ಕಾರದ ಎದುರು ನಾವು ಎದುರಿಸುತ್ತಿರುವ ಪರಿಸ್ಥಿತಿ ಹೇಗಿದೆ ಎಂಬುದು ಅವರಿಗೆ ಅರ್ಥವಾಗಲಿದೆ. ವಿರೋಧ ಪಕ್ಷಗಳ ಒಗ್ಗಟ್ಟು ನಮ್ಮ ಶಕ್ತಿ ಹಾಗೂ ಪ್ರಧಾನಿ ಮೋದಿಯವರ ದುರ್ಬಲತೆಯನ್ನು ತೋರಿಸಲಿದೆ ಎಂದು ಹೇಳಿದ್ದಾರೆ.
ಬಳಿಕ ಮಾತನಾಡಿರುವ ಹಿರಿಯ ಕಾಂಗ್ರೆಸ್ ನಾಯಕ ಆನಂತ್ ಶರ್ಮಾ ಅವರು, ಸರ್ಕಾರ ವಿರೋಧಿ ಜನರನ್ನು ಅಧಿಕಾರದಿಂದ ಕೆಳಗಿಳಿಸುವುದು ವಿರೋಧ ಪಕ್ಷಗಳ ಜವಾಬ್ದಾರಿಯಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್PM ModiPowerಶಕ್ತಿಭಾರತ್ ಬಂದ್Bharat bandhWeaknessOpposition unityವಿರೋಧ ಪಕ್ಷಗಳ ಒಗ್ಗಟ್ಟು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


