ರಾಜೀವ್ ಹಂತಕರ ಬಿಡುಗಡೆ; ಗವರ್ನರ್ ತಮಿಳುನಾಡು ಸರ್ಕಾರದ ಶಿಫಾರಸು ತಿರಸ್ಕಾರಸಲಿದ್ದಾರೆ: ಸ್ವಾಮಿ
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡುವಂತೆ ತಮಿಳುನಾಡು ಸರ್ಕಾರ ಮಾಡಿರುವ...

Published On :
ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡುವಂತೆ ತಮಿಳುನಾಡು ಸರ್ಕಾರ ಮಾಡಿರುವ ಶಿಫಾರಸನ್ನು ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಅವರು ತಿರಸ್ಕರಿಸಲಿದ್ದಾರೆ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಭಾನುವಾರ ಹೇಳಿದ್ದಾರೆ.
ಇಂದು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದ ಸಚಿವ ಸಂಪುಟ
ಎಲ್ಲಾ ಏಳು ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಲು ನಿರ್ಧರಿಸಿದೆ.
ತಮಿಳುನಾಡು ಸರ್ಕಾರದ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿದ ಸ್ವಾಮಿ, ಅದು ಕೇವಲ ಶಿಫಾರಸು ಮಾತ್ರ. ಅದನ್ನು ರಾಜ್ಯಪಾಲರು ಇನ್ನೂ ಅಂಗೀಕರಿಸಿಲ್ಲ. ರಾಜ್ಯಪಾಲರಿಗೆ ಸಂಪೂರ್ಣ ವಿವೇಚನಾ ಅಧಿಕಾರ ಇದ್ದು, ಅವರು ದಾಖಲೆಗಳನ್ನು ಆಧರಿಸಿ ಶಿಫಾರಸನ್ನು ತರಿಸ್ಕರಿಸುವ ಭರವಸೆ ಇದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Subramanian Swamyಸುಬ್ರಮಣಿಯನ್ ಸ್ವಾಮಿತಮಿಳುನಾಡು ಸರ್ಕಾರRajiv Gandhi assassinationರಾಜೀವ್ ಗಾಂಧಿ ಹತ್ಯೆTN Govt recommendation
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


