ದೇಶ

ಜಮ್ಮು-ಕಾಶ್ಮೀರ: ಕುಪ್ವಾರದಲ್ಲಿ ಎನ್'ಕೌಂಟರ್ 2 ಉಗ್ರರನ್ನು ಹೊಡೆದುರುಳಿಸಿದ ಸೇನೆ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಹಂದ್ವಾರ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಮಂಗಳವಾರ ತಿಳಿದುಬಂದಿದೆ...

ಜಮ್ಮು-ಕಾಶ್ಮೀರ: ಕುಪ್ವಾರದಲ್ಲಿ ಎನ್'ಕೌಂಟರ್ 2 ಉಗ್ರರನ್ನು ಹೊಡೆದುರುಳಿಸಿದ ಸೇನೆ
ಸಂಗ್ರಹ ಚಿತ್ರ
Published On :
ಕುಪ್ವಾರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಹಂದ್ವಾರ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಮಂಗಳವಾರ ತಿಳಿದುಬಂದಿದೆ.
ಹಂದ್ವಾರದ ಗಲೂರಾ ಎಂಬ ಪ್ರದೇಶದಲ್ಲಿ ಅಡಗಿ ಕುಳಿತಿದ್ದ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಎನ್ ಕೌಂಟರ್ ನಡೆಸಿ ಹತ್ಯೆ ಮಾಡಿದ್ದಾರೆಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. 
ಗಲೂರಾ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿದ್ದ ಮಾಹಿತಿ ತಿಳಿದುಬರುತ್ತಿದ್ದಂತೆಯೇ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು. ಕಾರ್ಯಾಚರಣೆ ನಡೆಸುತ್ತಿದ್ದಂತೆಯೇ ಉಗ್ರರು ಭದ್ರತಾ ಪಡೆಗಳು ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದರು. ಬಳಿಕ ಕಾರ್ಯಾಚರಣೆ ಎನ್'ಕೌಂಟರ್ ರೂಪ ಪಡೆದುಕೊಂಡಿತು. ಬಳಿಕ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಯಿತು. ಸ್ಥಳದಲ್ಲಿ ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿರುವ ಹಿನ್ನಲೆಯಲ್ಲಿ ಸೇನಾಪಡೆ ಕಾರ್ಯಾಚರಣೆ ಮುಂದುವರೆಸಿವೆ ಎಂದು ತಿಳಿಸಿದ್ದಾರೆ. 
ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆಗೈದ ಉಗ್ರರು
ಒಂದೆಡೆ ಭದ್ರತಾ ಪಡೆಗಳು ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಮತ್ತೊಂಡೆ ಉಗ್ರರು ನಾಗರೀಕ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದಾರೆಂದು ತಿಳಿದುಬಂದಿದೆ. 

ಅಬ್ದುಲ್ ಅಹದ್ ಗನೀ ಎಂಬ ವ್ಯಕ್ತಿಯನ್ನು ಬಾಬಾದೆಂಬ್ ಎಂಬ ಪ್ರದೇಶದಲ್ಲಿ ಉಗ್ರರು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. 

ಗನೀ ಅವರು, ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಶೇಖ್ ಪೊರಾ ಲಲಾಬ್ ಪ್ರದೇಶದ ನಿವಾಸಿಯಾಗಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.