ತೆಲಂಗಾಣದಲ್ಲಿ ಟಿಆರ್ ಎಸ್ ಎದುರಿಸಲು ಮೈತ್ರಿಗೆ ಮುಂದಾದ ಕಾಂಗ್ರೆಸ್
ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಹಂಗಾಮಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ನೇತೃತ್ವದ ಟಿಆರ್ ಎಸ್ ...

Published On :
ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಹಂಗಾಮಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ನೇತೃತ್ವದ ಟಿಆರ್ ಎಸ್ ಅನ್ನು ಎದುರಿಸಲು ಕಾಂಗ್ರೆಸ್ ಪ್ರತಿಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿದೆ.
ಪ್ರತಿಪಕ್ಷಗಳನ್ನು ಒಗ್ಗೂಡಿಸಲು ನಮ್ಮ ಪಕ್ಷ ಯತ್ನಿಸುತ್ತಿದೆ ಮತ್ತು ಈ ಸಂಬಂಧ ಸಿಪಿಐ, ಕೊಂಡರಾಮ್(ಟಿಜೆಎಸ್) ಹಾಗೂ ಟಿಡಿಪಿ ಜತೆ ನಿರಂತರ ಸಂಪರ್ಕದಲ್ಲಿದೆ ಎಂದು ತೆಲಂಗಾಣ ಕಾಂಗ್ರೆಸ್ ಉಸ್ತುವಾರಿ ಆರ್ ಸಿ ಖುಂಟಿಯಾ ಅವರು ಹೇಳಿದ್ದಾರೆ.
ಟಿಡಿಪಿ ಜತೆ ಮತ್ರಿ ಮಾಡಿಕೊಳ್ಳಲು ನಮಗೆ ಯಾವುದೇ ಸಮಸ್ಯೆ ಇಲ್ಲ ಎಂದಿರುವ ಖುಂಟಿಯಾ ಅವರು, ಕರ್ನಾಟಕದಲ್ಲಿ ಅತಿ ಹೆಚ್ಚು ಸ್ಥಾನಗಳಿಸಿದರೂ ಮುಖ್ಯಮಂತ್ರಿ ಸ್ಥಾನವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟ ಉದಾಹರಣೆಯನ್ನು ನೀಡಿದ್ದಾರೆ.
ಪ್ರತಿಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ವಿಚಾರ ಪ್ರಾಥಮಿಕ ಹಂತದಲ್ಲಿದೆ ಮತ್ತು ಸ್ಥಾನ ಹಂಚಿಕೆ ಬಗ್ಗೆಯೂ ಯಾವುದೇ ಚರ್ಚೆ ಆಗಿಲ್ಲ ಎಂದು ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಟಿಆರ್ ಎಸ್ ದುರಾಡಳಿತಕ್ಕೆ ಅಂತ್ಯಹಾಡಲು ಕಾಂಗ್ರೆಸ್ ಜೊತೆ ಕೈಜೋಡಿಸಿ ಎಂದು ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎನ್ ಉತ್ತಮ ಕುಮಾರ್ ರೆಡ್ಡಿ ಅವರು ಟಿಡಿಪಿ ಸೇರಿದಂತೆ ಇತರೆ ಪ್ರತಿಪಕ್ಷಗಳಿಗೆ ಕರೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


