ಉತ್ತರ ಪ್ರದೇಶ : ಗುಂಡಿಟ್ಟು ದಲಿತ ವೈದ್ಯಕೀಯ ವಿದ್ಯಾರ್ಥಿ ಹತ್ಯೆ
ಉತ್ತರ ಪ್ರದೇಶ ರಾಜ್ಯದ ಮುಜಾಫರ್ ನಗರ ಜಿಲ್ಲೆಯ ಮಂಡ್ಲ ಗ್ರಾಮದಲ್ಲಿ ಅಪರಿಚಿತ ದುಷ್ಕರ್ಮಿಗಳು ದಲಿತ ವೈದ್ಯಕೀಯ ವಿದ್ಯಾರ್ಥಿ ಮೇಲೆ ಗುಂಡು ಹಾರಿ ಹತ್ಯೆ ಮಾಡಿದ್ದಾರೆ.

ಮುಜಾಫರ್ ನಗರ : ಉತ್ತರ ಪ್ರದೇಶ ರಾಜ್ಯದ ಮುಜಾಫರ್ ನಗರ ಜಿಲ್ಲೆಯ ಮಂಡ್ಲ ಗ್ರಾಮದಲ್ಲಿ ಅಪರಿಚಿತ ದುಷ್ಕರ್ಮಿಗಳು ದಲಿತ ವೈದ್ಯಕೀಯ ವಿದ್ಯಾರ್ಥಿ ಮೇಲೆ ಗುಂಡು ಹಾರಿ ಹತ್ಯೆ ಮಾಡಿದ್ದಾರೆ.
ರಜತ್ ಹತ್ಯೆಗೊಳಗಾದ ಯುವಕ . ಈತ ಕಾಲೇಜ್ ಮುಗಿಸಿ ನಿನ್ನೆ ಸಂಜೆ ಮನೆಗೆ ವಾಪಾಸ್ ಆಗುತ್ತದ್ದಾಗ ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದಾರೆ ಎಂದು ವೃತ್ತ ಅಧಿಕಾರಿ ರಿಜ್ವಾನ್ ಅಹ್ಮದ್ ತಿಳಿಸಿದ್ದಾರೆ.
ರಜತ್ ದ್ವಿತೀಯ ವರ್ಷದ ವೈದ್ಯಕೀಯ ಕೋರ್ಸ್ ಮಾಡುತ್ತಿದ್ದ ಎನ್ನಲಾಗಿದೆ. ದುಷ್ಕರ್ಮಿಗಳು ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಅವರ ಕುಟುಂಬ ಸದಸ್ಯರು ಮೃತದೇಹವನ್ನು ರಸ್ತೆಯಲ್ಲಿ ಇಟ್ಟು ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಕುಟುಂಬ ಸದಸ್ಯರ ಮನವೊಲಿಸಿ ಪಾರ್ಥಿವ ಶರೀರವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಅಪರಿಚಿತ ದುಷ್ಕರ್ಮಿಗಳು ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆದಿದೆ ಎಂದು ರಿಜ್ವಾನ್ ಅಹ್ಮದ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


