ದೇಶ

ಲಾಲು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಾರೆ: ವೈದ್ಯಕೀಯ ವರದಿ

ಬಹುಕೋಟಿ ಮೇವು ಹಗರಣದಲ್ಲಿ ಜೈಲು ಪಾಲಾಗಿರುವ ಬಿಹಾರ ಮಾಜಿ ಮುಖ್ಯಮಂತ್ರಿ ಹಾಗೂ ಆರ್ ಜೆಡಿ ಮುಖ್ಯಸ್ಥ ಲಾಲು...

ಲಾಲು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಾರೆ: ವೈದ್ಯಕೀಯ ವರದಿ
ಲಾಲು ಪ್ರಸಾದ್ ಯಾದವ್
Published On :
ರಾಂಚಿ: ಬಹುಕೋಟಿ ಮೇವು ಹಗರಣದಲ್ಲಿ ಜೈಲು ಪಾಲಾಗಿರುವ ಬಿಹಾರ ಮಾಜಿ ಮುಖ್ಯಮಂತ್ರಿ ಹಾಗೂ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಾರೆ ಎಂದು ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆ(ಆರ್ ಐಎಂಎಸ್) ನಿರ್ದೇಶಕ ಆರ್ ಕೆ ಶ್ರೀವಾಸ್ತವ ಅವರು ಸೋಮವಾರ ತಿಳಿಸಿದ್ದಾರೆ.
ಲಾಲು ಪ್ರಸಾದ್ ಯಾದವ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಮ್ಮ ವರದಿಯಲ್ಲಿ ಖಿನ್ನತೆಯನ್ನು ಉಲ್ಲೇಖಿಸಿದ್ದಾರೆ ಎಂದು ಶ್ರೀವಾಸ್ತವ ಅವರು ಪಿಟಿಐಗೆ ತಿಳಿಸಿದ್ದಾರೆ. ಅಲ್ಲದೆ ಏಮ್ಸ್ ಆಸ್ಪತ್ರೆಯ ಡಿಸ್ಚಾರ್ಜ್ ವರದಿಯಲ್ಲೂ ಇದನ್ನು ಪ್ರಸ್ತಾಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಲಾಲು ಪ್ರಸಾದ್ ಯಾದವ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ಮನೋವೈದ್ಯರಿಗೂ ಅವರ ಸ್ಥಿತಿಯ ಬಗ್ಗೆ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಭ್ರಷ್ಟಾಚಾರ ಪ್ರಕರಣಗಳಿಂದ ಲಾಲು ಅವರ ಕುಟುಂಬದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದು, ಇದು ಆರ್ ಜೆಡಿ ಮುಖ್ಯಸ್ಥನ ಆರೋಗ್ಯ ಮತ್ತಷ್ಟು ಹದಗೆಡಲು ಕಾರಣವಾಗಿದೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ.
ಬಹುಕೋಟಿ ಮೇವು ಹಗರಣದ ನಾಲ್ಕು ಪ್ರಕರಣಗಳಲ್ಲಿ ಜೈಲು ಗುರಿಯಾಗಿರುವ ಲಾಲು ಪ್ರಸಾದ್ ಯಾದವ್ ಅವರು ಈಗ ರಾಂಚಿಯ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.