ಎಥೆನಾಲ್ ಘಟಕಗಳು ಪ್ರಾರಂಭವಾದ ಬಳಿಕ ಪೆಟ್ರೋಲ್, ಡೀಸೆಲ್ 55-50 ರೂಪಾಯಿಗಳಿಗೆ ಲಭ್ಯ!
ದಿನದಿಂದ ದಿನಕ್ಕೆ ಪೆಟ್ರೋಲ್-ಡೀಸೆಲ್ ದರ ಏರಿಕೆ ಜನತೆಗೆ ಹೊರೆಯಾಗುತ್ತಿದೆ. ಈ ನಡುವೆ ಪ್ರತಿಕ್ರಿಯೆ ನೀಡಿರುವ ರಸ್ತೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಶೀಘ್ರವೇ 5 ಎಥೆನಾಲ್ ಘಟಕಗಳು ಆರಂಭವಾಗಲಿವೆ.

Published On :
ನವದೆಹಲಿ: ದಿನದಿಂದ ದಿನಕ್ಕೆ ಪೆಟ್ರೋಲ್-ಡೀಸೆಲ್ ದರ ಏರಿಕೆ ಜನತೆಗೆ ಹೊರೆಯಾಗುತ್ತಿದೆ. ಈ ನಡುವೆ ಪ್ರತಿಕ್ರಿಯೆ ನೀಡಿರುವ ರಸ್ತೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಶೀಘ್ರವೇ 5 ಎಥೆನಾಲ್ ಘಟಕಗಳು ಆರಂಭವಾಗಲಿವೆ. ಇದರಿಂದಾಗಿ ಪೆಟ್ರೋಲ್-ಡೀಸೆಲ್ ಮುಂದಿನ ದಿನಗಳಲ್ಲಿ 55-50 ರೂಪಾಯಿಗಳಿಗೆ ಲಭ್ಯವಾಗಲಿದೆ ಎಂದು ಹೇಳಿದ್ದಾರೆ.
ಎಥೆನಾಲ್ ಘಟಕಗಳು ಕಾರ್ಯಾರಂಭ ಮಾಡಿದ ಕೂಡಲೇ ಪೆಟ್ರೋಲ್-ಡೀಸೆಲ್ ದರಗಳು ಗಣನೀಯವಾಗಿ ಕಡಿಮೆಯಾಗಲಿದೆ. ನಗರ ಪ್ರದೇಶಗಳಲ್ಲಿ ಉತ್ಪತ್ತಿಯಾಗುತ್ತಿರುವ ತ್ಯಾಜ್ಯಗಳಿಂದ ಘಟಕದಲ್ಲಿ ಇಂಧನ ಉತ್ಪತ್ತಿ ಮಾಡಲಾಗುತ್ತದೆ. ಭತ್ತ, ಗೋಧಿಯ ಹುಲ್ಲು, ಕಬ್ಬು ಇನ್ನಿತರ ಕೃಷಿಯಿಂದ ಉತ್ಪತ್ತಿಯಾಗುವ ತ್ಯಾಜ್ಯಗಳನ್ನು ಬಳಸಿ ಇಂಧನ ಉತ್ಪತ್ತಿ ಮಾಡಬಹುದಾಗಿದೆ. ಚತ್ತೀಸ್ ಗಢ ಜೈವಿಕ ಇಂಧನವನು ಹೆಚ್ಚು ಉತ್ಪತ್ತಿ ಮಾಡುವ ಸಾಮರ್ಥ್ಯ ಹೊಂದಿದೆ ಎಂದು ಗಡ್ಕರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


