ಚೌತಿಯಂದೇ 4 ಉಗ್ರರ ಸೆದೆ ಬಡಿದ ಸೇನೆ, ಪ್ರತ್ಯೇಕ ಪ್ರಕರಣಗಳಲ್ಲಿ 9 ಸೈನಿಕರಿಗೆ ಗಾಯ
ದೇಶಾದ್ಯಂತ ಜನ ಗಣೇಶ ಚತುರ್ಥಿಯ ಸಂಭ್ರಮದಲ್ಲಿದ್ದರೆ ಅತ್ತ ಕಾಶ್ಮೀರದಲ್ಲಿ ಮಾತ್ರ ಸೈನಿಕರು ಉಗ್ರರ ವಿರುದ್ಧ ಎನ್ ಕೌಂಟರ್ ನಲ್ಲಿ ತೊಡಗಿದ್ದು, 2 ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 4 ಮಂದಿ ಉಗ್ರರ ಹುಟ್ಟಡಗಿಸಿದ್ದಾರೆ.

Published On :
ಶ್ರೀನಗರ: ದೇಶಾದ್ಯಂತ ಜನ ಗಣೇಶ ಚತುರ್ಥಿಯ ಸಂಭ್ರಮದಲ್ಲಿದ್ದರೆ ಅತ್ತ ಕಾಶ್ಮೀರದಲ್ಲಿ ಮಾತ್ರ ಸೈನಿಕರು ಉಗ್ರರ ವಿರುದ್ಧ ಎನ್ ಕೌಂಟರ್ ನಲ್ಲಿ ತೊಡಗಿದ್ದು, 2 ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 4 ಮಂದಿ ಉಗ್ರರ ಹುಟ್ಟಡಗಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನೆ, ಸಿಆರ್ಪಿಎಫ್ ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಅಂತೆಯೇ ಗುಂಡಿನ ಚಕಮಕಿಯಲ್ಲಿ 9 ಯೋಧರು ಗಾಯಗೊಂಡಿದ್ದಾರೆ.
ಇನ್ನು ಬಾರಾಮುಲ್ಲಾ ಎನ್ ಕೌಂಟರ್ ವೇಳೆ ಇಬ್ಬರು ಉಗ್ರರು ತಪ್ಪಿಸಿಕೊಂಡಿದ್ದು, ತಪ್ಪಿಸಿಕೊಂಡಿದ್ದ ಉಗ್ರರಿಗಾಗಿ ಸೇನೆ ಶೋಧ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ರಿಯಾಸಿ ಜಿಲ್ಲೆಯ ಕಕರಿಯಾಲ್ ಪ್ರದೇಶದ ಮನೆಯೊಂದರಲ್ಲಿ ಅಡಗಿದ್ದ ಉಗ್ರರನ್ನು ಹೊಡೆದುರುಳಿಸಲು ಭದ್ರತಾ ಪಡೆಗಳು ಗುರುವಾರ ಕಾರ್ಯಾಚರಣೆಯನ್ನು ನಡೆಸಿದ್ದವು. ಈ ಸಂದರ್ಭದಲ್ಲಿ ಉಗ್ರರು ಭದ್ರತಾ ಸಿಬ್ಬಂದಿಯ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಇದರಿಂದಾಗಿ ಡಿಎಸ್ಪಿ ಮೋಹನ್ ಲಾಲ್ ಸೇರಿದಂತೆ ಐವರು ಸಿಆರ್ಪಿಎಫ್ ಯೋಧರು ಮತ್ತು ಮೂವರು ಪೊಲೀಸರು ಗಾಯಗೊಂಡಿದ್ದಾರೆ.
ಇದೀಗ ಇದೇ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತಿಬ್ಬರು ಉಗ್ರರನ್ನು ಹೊಡೆದುರುಳಿಸಿದ್ದು, ಅವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ವಾತ್ಲಾಬ್ ಸೆಕ್ಟರ್ನ ಕಮಾಂಡರ್ ಬ್ರಿಗೇಡಿಯರ್ ವಿ ಹರಿಹರನ್ ತಿಳಿಸಿದ್ದಾರೆ.
ವರದಿಗಾಗಿ ತೆರಳಿದ್ದ ಪತ್ರಕರ್ತರ ಪ್ರಾಣದ ಹಂಗು ತೊರೆದು ರಕ್ಷಣೆ ಮಾಡಿದ ಸೇನೆ
ಇನ್ನು ರಿಯಾಸಿ ಜಿಲ್ಲೆಯ ಕಕರಿಯಾಲ್ ಪ್ರದೇಶದಲ್ಲಿ ನಡೆಯುತ್ತಿದ್ದ ಎನ್ ಕೌಂಟರ್ ವರದಿಗೆ ತೆರಳಿದ್ದ ಪತ್ರಕರ್ತರೂ ಕೂಡ ಅಪಾಯಕ್ಕೆ ಸಿಲುಕಿದ ಘಟನೆ ನಡೆದಿತ್ತು. ಈ ವೇಳೆ ಸ್ಥಳದಲ್ಲಿದ್ದ ಸೈನಿಕರು ಪತ್ರಕರ್ತರನ್ನು ನೆಲದ ಮೇಲೆ ಮಲಗಿಸಿ ಉಗ್ರರ ವಿರುದ್ಧ ಗುಂಡಿನ ದಾಳಿ ನಡೆಸಿದರು. ಈ ವಿಡಿಯೋ ಇದೀಗ ವೈರಲ್ ಆಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


