ಸೀತಾರಾಮನ್ ಸುಳ್ಳು ಹೇಳುತ್ತಿದ್ದಾರೆ, ರಾಫೆಲ್ ಡೀಲ್ ಜೆಪಿಸಿ ತನಿಖೆಗೆ ವಹಿಸಿ: ಕಾಂಗ್ರೆಸ್
ಫ್ರಾನ್ಸ್ ನಿರ್ಮಿತ ರಾಫೆಲ್ ಯುದ್ಧ ವಿಮಾನಗಳ ಸಂಖ್ಯೆಗೆ ಸಂಬಂಧಿಸಿದಂತೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್....

Published On :
ನವದೆಹಲಿ: ಫ್ರಾನ್ಸ್ ನಿರ್ಮಿತ ರಾಫೆಲ್ ಯುದ್ಧ ವಿಮಾನಗಳ ಸಂಖ್ಯೆಗೆ ಸಂಬಂಧಿಸಿದಂತೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮತ್ತೆ ಸುಳ್ಳು ಹೇಳಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ರಾಫೆಲ್ ಡೀಲ್ ಅನ್ನು ಜಂಟಿ ಸಂಸದೀಯ ಸಮಿತಿ(ಜೆಪಿಸಿ) ತನಿಖೆಗೆ ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದೆ.
ಭಾರತೀಯ ವಾಯುಪಡೆಗೆ ಎಷ್ಟು ಯುದ್ಧ ವಿಮಾನಗಳ ಅಗತ್ಯವಿದೆ ಎಂಬ ವಿಚಾರದಲ್ಲಿ ರಕ್ಷಣಾ ಸಚಿವರು ಮತ್ತೆ ಸುಳ್ಳು ಹೇಳಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೇವಾಲ ಅವರು ಹೇಳಿದ್ದಾರೆ.
ಯುದ್ಧ ವಿಮಾನಗಳ ಸಂಖ್ಯೆಯನ್ನು 126ರಿಂದ 36ಕ್ಕೆ ಕಡಿತಗೊಳಿಸಿದ ಪ್ರಧಾನಿ ಮೋದಿ ನಿರ್ಧಾರದ ಬಗ್ಗೆ ಸ್ಪಷ್ಟ ವಿವರಣೆ ಇಲ್ಲ ಎಂದು ಸುರ್ಜೇವಾಲ ಆರೋಪಿಸಿದ್ದಾರೆ.
ಪಾರ್ಕಿಂಗ್ ಸೌಲಭ್ಯದಂತಹ ಮೂಲ ಸೌಕರ್ಯ ಕೊರತೆ ಹಾಗೂ ತಾಂತ್ರಿಕ ಕಾರಣಗಳಿಂದ 126 ಯುದ್ಧ ವಿಮಾನಗಳ ಖರೀದಿ ಒಪ್ಪಂದವನ್ನು 36ಕ್ಕೆ ಇಳಿಸಲಾಯಿತು ಎಂದು ಸೀತಾರಾಮನ್ ಅವರು ಹೇಳಿದ್ದರು.
ಸೀತಾರಾಮನ್ ಹೇಳಿಕೆ ಅಸಹ್ಯಕರ ಎಂದ ಸುರ್ಜೇವಾಲ ಅವರು, ಯುದ್ಧ ವಿಮಾನ ಡೆಲಿವೆರಿ ಮಾಡಲು ಬೇಕಾದ 6-8 ವರ್ಷದ ಅವಧಿಯಲ್ಲಿ ಕೇಂದ್ರ ಸರ್ಕಾರ ಮತ್ತು ಐಎಎಫ್ ಗೆ ಪಾರ್ಕಿಂಗ್ ಸ್ಥಳ ಮತ್ತು ನಿರ್ವಹಣಾ ಸೌಲಭ್ಯ ಒದಗಿಸಲು ಸಾಧ್ಯವಾಗುತ್ತಿರಲಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


