ನೂತನ ಮುಖ್ಯ ನ್ಯಾಯಮೂರ್ತಿಯಾಗಿ ರಂಜನ್ ಗಗೋಯ್ ನೇಮಕ
ಭಾರತದ ನೂತನ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ರಂಜನ್ ಗಗೋಯ್ ಅವರನ್ನು ಅಧಿಕೃತವಾಗಿ ನೇಮಕ ಮಾಡಲಾಗಿದೆ.

Published On :
ನವದೆಹಲಿ: ಭಾರತದ ನೂತನ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ರಂಜನ್ ಗಗೋಯ್ ಅವರನ್ನು ಅಧಿಕೃತವಾಗಿ ನೇಮಕ ಮಾಡಲಾಗಿದೆ.
ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಮತ್ತು ಕೇಂದ್ರ ಸರ್ಕಾರದ ಶಿಫಾರಸ್ಸಿನ ಮೇರೆಗೆ ನೂತನ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ರಂಜನ್ ಗಗೋಯ್ ಅವರನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನೇಮಕ ಮಾಡಿದ್ದಾರೆ.
ಮೂಲಗಳ ಪ್ರಕಾರ ಅಕ್ಟೋಬರ್ 2ರಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ಅವಧಿ ಪೂರ್ಣಗೊಳ್ಳಲ್ಲಿದ್ದು, ಅಕ್ಟೋಬರ್ 3ರಂದು ರಂಜನ್ ಗಗೋಯ್ ಮುಖ್ಯ ನ್ಯಾಯಮೂರ್ತಿಗಳಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಆ ಮೂಲಕ ಈಶಾನ್ಯ ಭಾರತದಿಂದ ಭಾರತದ ಮುಖ್ಯ ನ್ಯಾಯಮೂರ್ತಿ ಆಯ್ಕೆಯಾದ ಮೊದಲ ನ್ಯಾಯಮೂರ್ತಿ ಎಂಬ ಹೆಗ್ಗಳಿಕೆಗೂ ರಂಜನ್ ಗಗೋಯ್ ಪಾತ್ರರಾಗಿದ್ದಾರೆ.
ಈಗ್ಗೆ 8 ತಿಂಗಳ ಹಿಂದೆ ಅಂದರೆ ಕಳೆದ ಜನವರಿಯಲ್ಲಿ ಇದೇ ಜಸ್ಟಿಸ್ ರಂಜನ್ ಗಗೋಯ್ ಮತ್ತು ಇತರೆ ನಾಲ್ಕು ಮಂದಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ಕಾರ್ಯವೈಖರಿಯನ್ನು ಟೀಕಿಸಿದ್ದರು. ಜಂಟಿ ಸುದ್ದಿಗೋಷ್ಠಿ ಕರೆದಿದ್ದ ನ್ಯಾಯಮೂರ್ತಿಗಳು ಇಡೀ ದೇಶದ ಗಮನ ಸೆಳೆದಿದ್ದರು. ಸುಪ್ರೀಂ ಕೋರ್ಟ್ ಇತಿಹಾಸದಲ್ಲೇ ಇಂತಹ ಘಟನೆ ಮೊದಲನೆಯದಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtನವದೆಹಲಿNew Delhiಸುಪ್ರೀಂ ಕೋರ್ಟ್ಮುಖ್ಯ ನ್ಯಾಯಮೂರ್ತಿChief Justice of IndiaRamnath Kovindರಾಮನಾಥ್ ಕೋವಿಂದ್Ranjan Gogoiರಂಜನ್ ಗಗೋಯ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


