ಇಸ್ರೋ ಗೂಢಚಾರಿಕೆ: ವಿಜ್ಞಾನಿ ನಂಬಿ ನಾರಾಯಣ್ ಗೆ 50 ಲಕ್ಷ ರೂ. ಪರಿಹಾರ ಕೊಡಿ, ಕೇರಳ ಸರ್ಕಾರಕ್ಕೆ ಸುಪ್ರೀಂ ಆದೇಶ
ಇಸ್ರೋ ವಿಜ್ಞಾನಿಯ ಗೂಢಚಾರಿಕೆ ಪ್ರಕರಣದ ತೀರ್ಪು ಹೊರಬಂದಿದೆ. ಸುಪ್ರೀಂ ಕೋರ್ಟ್ ಇಸ್ರೋ ವಿಜ್ಞಾನಿ ನಂಬಿ ನಾರಾಯಣ್ ಅವರಿಗೆ...

Published On :
ನವದೆಹಲಿ: ಇಸ್ರೋ ವಿಜ್ಞಾನಿಯ ಗೂಢಚಾರಿಕೆ ಪ್ರಕರಣದ ತೀರ್ಪು ಹೊರಬಂದಿದೆ. ಸುಪ್ರೀಂ ಕೋರ್ಟ್ ಇಸ್ರೋ ವಿಜ್ಞಾನಿ ನಂಬಿ ನಾರಾಯಣ್ ಅವರಿಗೆ ರೂ. 50 ಲಕ್ಷ ಪರಿಹಾರ ನೀಡುವಂತೆ ಕೇರಳ ಸರ್ಕಾರಕ್ಕೆ ಸೂಚಿಸಿದೆ ಮತ್ತು ಅವರ ಬಂಧನ "ಅನಗತ್ಯ" ಆಗಿತ್ತು ಎಂದು ಅಭಿಪ್ರಾಯಪಟ್ಟಿದೆ.
ಇಸ್ರೋ ಗೂಢಚಾರ ಪ್ರಕರಣದಲ್ಲಿ ಆರೋಪಿಯಾಗಿದ್ದರೆಂದು ವಿಜ್ಞಾನಿ ನಂಬಿ ನಾರಾಯಣ್ ವಿರುದ್ಧ ದೋಷಾರೋಪಣೆ ಮಾಡಿದ್ದ ಕೇರಳ ಪೋಲೀಸರು 24 ವರ್ಷಗಳ ಹಿಂದೆ ಅವರನ್ನು ಬಂಧಿಸಿದ್ದರು.
ನಂಬಿ ನಾರಾಯಣ್ ಕೇರಳ ಪೋಲೀಸರಿಂದ "ಅನಗತ್ಯ ಬಂಧನಕ್ಕೊಳಗಾಗಿ ಕಿರುಕುಳ ಅನುಭವಿಸಿದ್ದಾರೆ" ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
ಇದಕ್ಕೆ ಮುನ್ನ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿ.ಕೆ.ಜೈನ್ ಅವರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿ ತನಿಖೆ ಕೈಗೊಂಡಿದ್ದಿತು.
ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ಎಎಂ ಖಾನ್ವಿಲ್ಕರ್ ಮತ್ತು ಡಿ ವೈ ಚಂದ್ರಚೂದ್ ಅವರನ್ನೊಳಗೊಂಡ ಪೀಠವು ಈ ಮುನ್ನ ಜುಲೈ ನಲ್ಲಿ ಪ್ರಕರಣದ ವಿಚಾರಣೆ ನಡೆಸಿತ್ತು.ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆಗೆ ಸಿಬಿಐ ಸಿದ್ದವಿದೆ ಎಂದು ತನಿಖಾ ಸಂಸ್ಥೆ ಒಪ್ಪಿಕೊಂಡಿದ್ದ ಹಿನ್ನೆಲೆಯಲ್ಲಿ ಸುಪ್ರೀಂ ತನ್ನ ಅಂತಿಮ ಆದೇಶವನ್ನು ಕಾಯ್ದಿರಿಸಿತ್ತು.
ಇಸ್ರೋ ವಿಜ್ಞಾನಿ, ನಾರಾಯಣ್ ಅವರನ್ನು ಬೇಹುಗಾರಿಕೆ ಆರೋಪದಡಿ ನವೆಂಬರ್ 30, 1994 ರಂದು ಬಂಧಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


