ಜಮ್ಮು-ಕಾಶ್ಮೀರ: ನದಿಗೆ ಉರುಳಿ ಬಿದ್ದ ಬಸ್, 12 ಮಂದಿ ಸಾವು, ಹಲವರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಕಿಸ್ತಾವರ್ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಿಯಂತ್ರಣ ತಪ್ಪಿದ್ದ ವ್ಯಾನ್'ವೊಂದು ನದಿಗೆ ಉರುಳಿ ಬಿದ್ದ ಪರಿಣಾಮ 12 ಮಂದಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ...

Published On :
ಕಿಸ್ತಾವರ್: ಜಮ್ಮು ಮತ್ತು ಕಾಶ್ಮೀರದ ಕಿಸ್ತಾವರ್ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಿಯಂತ್ರಣ ತಪ್ಪಿದ್ದ ವ್ಯಾನ್'ವೊಂದು ನದಿಗೆ ಉರುಳಿ ಬಿದ್ದ ಪರಿಣಾಮ 12 ಮಂದಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.
ಕಿಸ್ತಾವರ್'ನಿಂದ 18 ಕಿಮೀ ದೂರದಲ್ಲಿರುವ ಥಕ್ರೈ ತಲುಪಿದಾಗ ವಾಹನದ ಮೇಲಿದ್ದ ನಿಯಂತ್ರಣವನ್ನು ಚಾಲಕ ಕಳೆದುಕೊಂಡಿದ್ದಾರೆ. ಈ ವೇಳೆ ವ್ಯಾನ್ ನದಿಗೆ ಉರುಳಿ ಬಿದ್ದಿದೆ ಎಂದು ತಿಳಿದುಬಂದಿದೆ.
ವಾಹನದಲ್ಲಿ 30-35 ಮಂದಿ ಪ್ರಯಾಣಿಕರಿದ್ದರು ಎಂದು ವರದಿಗಳು ತಿಳಿಸಿವೆ. ಘಟನೆಯಲ್ಲಿ 12 ಮಂದಿ ಸಾವನ್ನಪ್ಪಿದ್ದು, 13 ಮಂದಿ ಗಾಯಾಳುಗಳನ್ನು ಅಧಿಕಾರಿಗಳು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಉಳಿದವರಿಗಾಗಿ ಕಾರ್ಯಾಚರಣೆಗಳು ಮುಂದುವರೆದಿವೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


