ಮಲ್ಯ-ಜೇಟ್ಲಿ ವಿವಾದ; ಪ್ರಧಾನಿ ವಿವರಣೆ ನೀಡಬೇಕು ಎಂದು ಒತ್ತಾಯಿಸಿದ ಡಿಎಂಕೆ
ವಿಜಯ್ ಮಲ್ಯ ಭಾರತ ಬಿಟ್ಟು ಹೋಗುವ ಮುನ್ನ ಅವರು ಮತ್ತು ಹಣಕಾಸು ಸಚಿವ ಅರುಣ್ ಜೇಟ್ಲಿ ನಡುವೆ ...

ಚೆನ್ನೈ: ವಿಜಯ್ ಮಲ್ಯ ಭಾರತ ಬಿಟ್ಟು ಹೋಗುವ ಮುನ್ನ ಅವರು ಮತ್ತು ಹಣಕಾಸು ಸಚಿವ ಅರುಣ್ ಜೇಟ್ಲಿ ನಡುವೆ ಏನು ಮಾತುಕತೆ ನಡೆದಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಹಿರಂಗಪಡಿಸಬೇಕು ಅಥವಾ ಜೇಟ್ಲಿಯನ್ನು ಸಂಪುಟದಿಂದ ತೆಗೆದುಹಾಕಬೇಕು ಎಂದು ಡಿಎಂಕೆ ಒತ್ತಾಯಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್, ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿ ಮಾಡಿರುವ ವಿಷಯವನ್ನು ವಿಜಯ್ ಮಲ್ಯ ಅವರೇ ಬಹಿರಂಗಪಡಿಸಿದ್ದು ಇದರಿಂದ ಬಿಜೆಪಿ ಕಾರ್ಪೊರೇಟ್ ಉದ್ಯಮಿಗಳ ಕೈಗೊಂಬೆಯಾಗಿದೆ ಎಂಬುದು ಗೊತ್ತಾಗುತ್ತದೆ ಎಂದರು.
ಇವರಿಬ್ಬರ ನಡುವೆ ಏನು ಮಾತುಕತೆ ನಡೆಯಿತು ಎಂದು ಪ್ರಧಾನಿ ಬಹಿರಂಗಪಡಿಸಬೇಕು, ಇಲ್ಲದಿದ್ದರೆ ಅವರನ್ನು ಸಚಿವ ಸ್ಥಾನದಿಂದ ಕಿತ್ತು ಹಾಕಬೇಕು ಎಂದು ಸ್ಟಾಲಿನ್ ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


