ದೇಶ

ಮತ್ತೊಂದು ಹೆಣ್ಣುಮಗುವಿಗೆ ಜನ್ಮ ನೀಡಿದ ಪತ್ನಿ: ಪುಟ್ಟ ಕಂದಮ್ಮನನ್ನು ಮಹಡಿಯಿಂದ ಕೆಳಗೆ ಎಸೆದ ಕ್ರೂರ ತಂದೆ

ಪತ್ನಿ ಮತ್ತೊಮ್ಮೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆಂಬ ಕಾರಣಕ್ಕೆ ತೀವ್ರವಾಗಿ ಕೆಂಡಾಮಂಡಲಗೊಂಡ ಕ್ರೂರ ಪತಿಯೊಬ್ಬ 18 ತಿಂಗಳ ಪುಟ್ಟ ಮಗುವನ್ನು ಮಹಡಿಯಿಂದ ಕೆಳಗೆಸೆದಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ...

ಮತ್ತೊಂದು ಹೆಣ್ಣುಮಗುವಿಗೆ ಜನ್ಮ ನೀಡಿದ ಪತ್ನಿ: ಪುಟ್ಟ ಕಂದಮ್ಮನನ್ನು ಮಹಡಿಯಿಂದ ಕೆಳಗೆ ಎಸೆದ ಕ್ರೂರ ತಂದೆ
ಸಂಗ್ರಹ ಚಿತ್ರ
Published On :
ಬರೇಲಿ: ಪತ್ನಿ ಮತ್ತೊಮ್ಮೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆಂಬ ಕಾರಣಕ್ಕೆ ತೀವ್ರವಾಗಿ ಕೆಂಡಾಮಂಡಲಗೊಂಡ ಕ್ರೂರ ಪತಿಯೊಬ್ಬ 18 ತಿಂಗಳ ಪುಟ್ಟ ಮಗುವನ್ನು ಮಹಡಿಯಿಂದ ಕೆಳಗೆಸೆದಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. 
ಘಟನೆಯಲ್ಲಿ 18 ತಿಂಗಳ ಕಾವ್ಯ ಎಂಬ ಹೆಣ್ಣು ಮಗು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 
ಘಟನೆ ವೇಳೆ ಮಗುವಿನ ತಂದೆ ಅರವಿಂದ್ ಗಂಗ್ವಾರ್ ಮದ್ಯದ ಅಮಲಿನಲ್ಲಿದ್ದ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. 
ಐದು ದಿನಗಳ ಹಿಂದಷ್ಟೇ ಅರವಿಂದ್ ಪತ್ನಿ ಎರಡನೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ಇದಾದ ಬಳಿಕ ಮನೆಯಲ್ಲಿ ಪ್ರತಿನಿತ್ಯ ಜಗಳ ನಡೆಯುತ್ತಲೇ ಇತ್ತು. ಗುರುವಾರ ತೀವ್ರವಾಗಿ ಕೆಂಡಾಮಂಡಲಗೊಂಡಿದ್ದ ಅರವಿಂದ್ ಮಗುವನ್ನು ಮಹಡಿಯಿಂದ ಕೆಳಗೆ ಎಸೆದಿದ್ದಾನೆಂದು ಗ್ರಾಮಸ್ಥರು ಹೇಳಿದ್ದಾರೆ. 
ಪ್ರಕರಣ ಸಂಬಂಧ ಕೊಲೆ ಯತ್ನ ಆರೋಪದ ಅಡಿಯಲ್ಲಿ ಅರವಿಂದ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಎಸ್'ಪಿ. ಅಭಿಮನ್ಯು ಸಿಂಗ್ ಅವರು ತಿಳಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.