ರಾಫೆಲ್ ಡೀಲ್ ಬಗ್ಗೆ ವಿವರಣೆ ನೀಡಲ್ಲ, ವಿಪಕ್ಷಗಳಿಗೆ ಆ ಅರ್ಹತೆ ಇಲ್ಲ: ಸೀತಾರಾಮನ್
ರಾಫೆಲ್ ಜೆಟ್ ಒಪ್ಪಂದದ ಬಗ್ಗೆ ಸರ್ಕಾರವನ್ನು ಪ್ರಶ್ನಿಸುತ್ತಿರುವ ವಿಪಕ್ಷಗಳಿಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿಕ್ರಿಯೆ ನೀಡಿದ್ದು, ಒಪ್ಪಂದದ ಬಗ್ಗೆ ವಿವರಣೆ ನೀಡುವುದಿಲ್ಲ ಎಂದು ಹೇಳಿದ್ದಾರೆ.

Published On :
ರಾಫೆಲ್ ಜೆಟ್ ಒಪ್ಪಂದದ ಬಗ್ಗೆ ಸರ್ಕಾರವನ್ನು ಪ್ರಶ್ನಿಸುತ್ತಿರುವ ವಿಪಕ್ಷಗಳಿಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿಕ್ರಿಯೆ ನೀಡಿದ್ದು, ಒಪ್ಪಂದದ ಬಗ್ಗೆ ವಿವರಣೆ ನೀಡುವುದಿಲ್ಲ ಎಂದು ಹೇಳಿದ್ದಾರೆ.
ದೇಶದ ರಕ್ಷಣಾ ಸನ್ನದ್ಧತೆಯಂತಹ ಸೂಕ್ಷ್ಮ ವಿಷಯಗಳ ಬಗ್ಗೆ ಕೆಸೆರೆರೆಚಾಟ ಮಾಡಿರುವ ವಿಪಕ್ಷಗಳು ರಾಫೆಲ್ ಒಪ್ಪಂದದ ಕುರಿತು ವಿವರಣೆ ಪಡೆಯುವ ಅರ್ಹತೆ ಇಲ್ಲ ಎಂದು ನಿರ್ಮಲಾ ಸೀತಾರಾಮನ್ ಕಟುವಾಗಿ ಟೀಕಿಸಿದ್ದಾರೆ. ಚೀನಾ-ಪಾಕಿಸ್ತಾನ ಸ್ಲೀಟ್ ಫೈಟರ್ ಗಳನ್ನು ಆಮದು ಮಾಡಿಕೊಂಡು ತಮ್ಮ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಭಾರತವೂ ಸಹ ರಾಫೆಲ್ ಜೆಟ್ ನ ಎರಡು ಸ್ಕ್ವಾಡ್ರನ್ ಗಳನ್ನು ತುರ್ತಾಗಿ ಖರೀದಿಸಲು ನಿರ್ಧಾರ ಮಾಡಿತ್ತು. ಇದರಲ್ಲಿ ವಿವರಣೆ ನೀಡುವಂಥದ್ದೇನಿದೆ? ಯುಪಿಎ ಸರ್ಕಾರದ ಅವಧಿಯಲ್ಲಿ ರಾಫೆಲ್ ಒಪ್ಪಂದಕ್ಕೆ ಸಂಬಂಧಿಸಿದಂತೆ ಒಪ್ಪಿಗೆ ಮಾಡಿಕೊಳ್ಳದೇ ಇರುವ ಅಂಶಗಳನ್ನಿಟ್ಟುಕೊಂಡು ವಿಪಕ್ಷಗಳು ದೇಶವನ್ನು ದಾರಿ ತಪ್ಪಿಸುತ್ತಿವೆ ಎಂದು ನಿರ್ಮಲಾ ಸೀತಾರಾಮನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


