ಜಮ್ಮು-ಕಾಶ್ಮೀರ: ಕುಲ್ಗಾಮ್ ಎನ್ ಕೌಂಟರ್; ಐವರು ಎಲ್ಈಟಿ, ಹಿಜ್ಬುಲ್ ಉಗ್ರರ ಹತ್ಯೆ
ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ನಡೆದ ಗುಂಡಿನ ಕಾಳಗದಲ್ಲಿ ಲಷ್ಕರ್ ಇ-ತೈಬಾ ಮತ್ತು ಹಿಜ್ಬುಲ್ ಸಂಘಟನೆಯ...

ಶ್ರೀನಗರ: ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ನಡೆದ ಗುಂಡಿನ ಕಾಳಗದಲ್ಲಿ ಲಷ್ಕರ್ ಇ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಗಳ ಐವರು ಉಗ್ರರು ಮೃತಪಟ್ಟಿದ್ದಾರೆ.
ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಚೌಗಮ್ ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಐವರು ಉಗ್ರಗಾಮಿಗಳು ಮೃತಪಟ್ಟಿದ್ದಾರೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ. ಎನ್ ಕೌಂಟರ್ ನಡೆದ ಸ್ಥಳದಿಂದ ಬಂದೂಕು, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದೀಗ ಕಾರ್ಯಾಚರಣೆ ಮುಗಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಗ್ರರ ಇರುವಿಕೆ ಬಗ್ಗೆ ಮಾಹಿತಿ ಪಡೆದ ಭದ್ರತಾ ಪಡೆ ಯೋಧರು ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆಯನ್ನು ಆರಂಭಿಸಿದರು. ಯೋಧರ ಆಗಮನದ ವಿಷಯ ತಿಳಿದ ಉಗ್ರರು ಗುಂಡಿನ ಮಳೆಗೈಯಲು ಆರಂಭಿಸಿದರು. ಅದಕ್ಕೆ ಯೋಧರು ತಕ್ಕ ಪ್ರತ್ಯುತ್ತರ ನೀಡಿ ಐವರನ್ನು ಹತ್ಯೆಗೈದರು.
ಇತ್ತೀಚೆಗೆ ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಇದು ಪೊಲೀಸರಿಗೆ ಮತ್ತು ಭದ್ರತಾ ಪಡೆ ಯೋಧರಿಗೆ ಯಶಸ್ವಿಯಾದದ್ದು. ಮೃತ ಉಗ್ರರು ಇತ್ತೀಚೆಗೆ ಇಬ್ಬರು ಬ್ಯಾಂಕು ಉದ್ಯೋಗಿಗಳನ್ನು ಮತ್ತು ಕೆಲವು ಪೊಲೀಸರನ್ನು ಹತ್ಯೆ ಮಾಡಿ ಸರಣಿ ಕೃತ್ಯವೆಸಗಿದವರಾಗಿದ್ದಾರೆ. ಅಲ್ಲದೆ ಬ್ಯಾಂಕು ದರೋಡೆ ಮತ್ತು ಶಸ್ತ್ರಾಸ್ತ್ರಗಳನ್ನು ಲೂಟಿ ಕೂಡ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಈ ಮಧ್ಯೆ ಇಂದು ನಸುಕಿನ ಜಾವ ಎನ್ ಕೌಂಟರ್ ನಡೆದ ಸ್ಥಳದಲ್ಲಿ ಯುವಕರ ಗುಂಪೊಂದು ಭದ್ರತಾ ಪಡೆ ಯೋಧರ ಮೇಲೆ ಏಕಾಏಕಿ ಕಲ್ಲು ಎಸೆದು ದಾಳಿ ನಡೆಸಿದ್ದರಿಂದ ಘರ್ಷಣೆ ಉಂಟಾಗಿದೆ. ಕೆಲವು ಯುವಕರು ಘರ್ಷಣೆಯಲ್ಲಿ ಗಾಯಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


