ಲೋಕಸಭಾ ಚುನಾವಣೆ ಮುನ್ನ ರಾಮಮಂದಿರ ನಿರ್ಮಾಣ ಆರಂಭ - ರಾಮ್ ವಿಲಾಸ್ ವೇದಾಂತಿ
2019ರ ಲೋಕಸಭಾ ಚುನಾವಣೆಗೂ ಮುಂಚಿತವಾಗಿ ಆಯೋದ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ಮಾಜಿ ಬಿಜೆಪಿ ಸಂಸದ ಹಾಗೂ ರಾಮ ಜನ್ಮಭೂಮಿ ನ್ಯಾಸ ಅಧ್ಯಕ್ಷ ರಾಮ್ ವಿಲಾಸ್ ವೇದಾಂತಿ ಹೇಳಿದ್ದಾರೆ.

Published On :
ಅಲಹಾಬಾದ್ : 2019ರ ಲೋಕಸಭಾ ಚುನಾವಣೆಗೂ ಮುಂಚಿತವಾಗಿ ಆಯೋದ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ಮಾಜಿ ಬಿಜೆಪಿ ಸಂಸದ ಹಾಗೂ ರಾಮ ಜನ್ಮಭೂಮಿ ನ್ಯಾಸ ಅಧ್ಯಕ್ಷ ರಾಮ್ ವಿಲಾಸ್ ವೇದಾಂತಿ ಹೇಳಿದ್ದಾರೆ.
ರಾಮ ಮಂದಿರ ವಿವಾದವನ್ನು ಬಿಜೆಪಿ ಬಗೆಹರಿಸಲಿದ್ದು, ಸಾರ್ವತ್ರಿಕ ಚುನಾವಣೆಗೂ ಮುಂಚಿತವಾಗಿ ಮಂದಿರ ಕಟ್ಟಡ ಕಾಮಗಾರಿ ಆರಂಭವಾಗಲಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಅಯೋದ್ಯೆಯಲ್ಲಿ ರಾಮ ಆಶೀರ್ವದಿಸಿದ್ದಾಗ ರಾಮ ಮಂದಿರ ನಿರ್ಮಾಣ ಮಾಡಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜುಲೈ 25 ರಂದು ಹೇಳಿಕೆ ನೀಡಿದ್ದರು.
ಅಯೋದ್ಯೆಯಲ್ಲಿ ಕ್ರಿ. ಶ. 1528ರಲ್ಲಿ ಮೊಘಲ್ ದೊರೆ ಬಾಬರ್ ನಿರ್ಮಿಸಿದ ಬಾಬ್ರಿ ಮಸೀದಿಯನ್ನು ಡಿಸೆಂಬರ್ 6, 1992 ರಂದು ಹಿಂದೂ ಪರ ಸಂಘಟನೆಗಳಿಂದ ಧ್ವಂಸಗೊಳಿಸಲಾಗಿತ್ತು. ರಾಮಮಂದಿರವನ್ನು ಕೆಡವಿ ಬಾಬರ್ ಮಸೀದಿ ನಿರ್ಮಿಸಿದ್ದ ಎಂದು ಆನಂತರ ಹಿಂದೂಪರ ಕಾರ್ಯಕರ್ತರು ಸಮರ್ಥಿಸಿಕೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿUPಲೋಕಸಭಾ ಚುನಾವಣೆconstructionRam templeರಾಮ ಮಂದಿರಕಟ್ಟಡRam Vilas Vedantiರಾಮ್ ವಿಲಾಸ್ ವೇದಾಂತಿLokasabha Poll ಉತ್ತರ ಪ್ರದೇಶ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


