ದೇಶ

'ಮಹಾಘಟಬಂಧನ' ದಿಂದ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುತ್ತೇವೆ: ಅಖಿಲೇಶ್

2019ರ ಲೋಕಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳು ಬಲವಾದ ಮೈತ್ರಿ ಮಾಡಿಕೊಳ್ಳುವ ಮೂಲಕ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವುದಾಗಿ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

'ಮಹಾಘಟಬಂಧನ' ದಿಂದ  ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುತ್ತೇವೆ: ಅಖಿಲೇಶ್
ಅಖಿಲೇಶ್ ಯಾದವ್
Published On :

ಲಖನೌ : 2019ರ ಲೋಕಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳು  ಬಲವಾದ ಮೈತ್ರಿ ಮಾಡಿಕೊಳ್ಳುವ ಮೂಲಕ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವುದಾಗಿ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ  ಅಖಿಲೇಶ್ ಯಾದವ್  ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರತಿಪಕ್ಷಗಳು ಮಾತ್ರವಲ್ಲ, ದೇಶದ ಜನರು ಕೂಡಾ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಬಯಸಿದ್ದು, ಅವರು ಮತ ನೀಡಲ್ಲ , ಮುಂದಿನ ದಿನಗಳಲ್ಲಿ ಸದೃಢ ಮಹಾಘಟಬಂಧನ ವನ್ನು ನೀವು ನೋಡುವಿರಿ ಎಂದರು.
ಉತ್ತರ ಪ್ರದೇಶದಲ್ಲಿ ನ್ಯಾಯೋಚಿತವಾಗಿ  ಸ್ಥಾನ ಹೊಂದಾಣಿಕೆ  ಏರ್ಪಟ್ಟರೆ ಮಾತ್ರ ಪ್ರತಿಪಕ್ಷಗಳ ಮೈತ್ರಿ ಸೇರುವುದಾಗಿ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ  ಹೇಳಿಕೆ ನೀಡಿದ್ದ ಬೆನ್ನಲ್ಲೇ ಅಖಿಲೇಶ್ ಯಾದವ್ ಈ ರೀತಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.