ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಬಳಸಿದ ಇವಿಎಂ ಸುರಕ್ಷಿತವಾಗಿಡಿ: ದೆಹಲಿ ವಿವಿಗೆ ಹೈಕೋರ್ಟ್ ಆದೇಶ
ವಿದ್ಯಾರ್ಥಿ ಸಂಘದ ಚುನಾವಣೆಯ ಬಳಸಿದ ಇವಿಎಂಗಳನ್ನು ಸುರಕ್ಷಿತವಾಗಿಡುವಂತೆ ದೆಹಲಿ ಹೈಕೋರ್ಟ್ ಸೋಮವಾರ....

Published On :
ನವದೆಹಲಿ: ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಬಳಸಿದ ಇವಿಎಂಗಳನ್ನು ಸುರಕ್ಷಿತವಾಗಿಡುವಂತೆ ದೆಹಲಿ ಹೈಕೋರ್ಟ್ ಸೋಮವಾರ ದೆಹಲಿ ವಿಶ್ವವಿದ್ಯಾಲಯಕ್ಕೆ ಆದೇಶಿಸಿದೆ.
ಕಾಂಗ್ರೆಸ್ ಬೆಂಬಲಿತ ಎನ್ಎಸ್ ಯುಐ ನ ಮೂವರು ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿದ್ದಾರ್ಥ್ ಮೃದುಲ್ ಅವರು, ಇವಿಎಂ, ಪೇಪರ್ ಟ್ರಯಲ್ ಹಾಗೂ ಚುನಾವಣೆಗೆ ಬಳಸಿದ ಇತರೆ ದಾಖಲೆಗಳನ್ನು ಸುರಕ್ಷಿತವಾಗಿಡುವಂತೆ ದೆಹಲಿ ವಿವಿಗೆ ಸೂಚಿಸಿದ್ದಾರೆ.
ಈ ಸಂಬಂಧ ಪ್ರತಿಕ್ರಿಯೆ ಸಲ್ಲಿಸುವಂತೆ ದೆಹಲಿ ವಿವಿ ನೇಮಕಮಾಡಿದ್ದ ಚುನಾವಣಾ ಅಧಿಕಾರಿ, ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಹಾಗೂ ಚುನಾವಣಾ ಆಯೋಗ ಮತ್ತು ಚುನಾವಣೆಯಲ್ಲಿ ಗೆದ್ದ ಮೂವರು ಎಬಿವಿಪಿ ಅಭ್ಯರ್ಥಿಗಳಿಗೆ ಕೋರ್ಟ್ ಆದೇಶಿಸಿದೆ.
ಚುನಾವಣೆಯಲ್ಲಿ ಇವಿಎಂಗಳನ್ನು ತಿರುಚಲಾಗಿದೆ ಎಂದು ಆರೋಪಿಸಿ ಎನ್ಎಸ್ ಯುಐ ನ ಸನ್ನಿ ಚಿಲ್ಲರ್ ಮೀನಾ ಮತ್ತು ಸೌರಭ್ ಯಾದವ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲದೆ ಏಳು ಇವಿಎಂಗಳ ಡೇಟಾ ನಾಪತ್ತೆಯಾಗಿದೆ ಎಂದು ಆರೋಪಿಸಿದ್ದಾರೆ.
ಕಳೆದ ಗುರುವಾರ ನಡೆದ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಎಬಿವಿಪಿ ಅಧ್ಯಕ್ಷ ಸ್ಥಾನ ಸೇರಿದಂತೆ ಮೂರು ಪ್ರಮುಖ ಹುದ್ದೆಗಳನ್ನು ತನ್ನದಾಗಿಸಿಕೊಂಡಿತ್ತು. ಎನ್‌ಎಸ್‌ಯುಐ ಜಿದ್ದಾ ಜಿದ್ದಿ ನ ಹೋರಾಟದಲ್ಲಿ ಒಂದು ಸ್ಥಾನ ಮಾತ್ರ ಪಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


