ದೇಶ

ಮೋದಿಗೆ 68ನೇ ಹುಟ್ಟುಹಬ್ಬ: ವಾರಣಾಸಿಯಲ್ಲಿ ಮಕ್ಕಳೊಂದಿಗೆ ಆಚರಣೆ; ಶುಭಾಶಯಗಳ ಮಹಾಪೂರ

ಪ್ರಧಾನಿ ನರೇಂದ್ರ ಮೋದಿ ಇಂದು 68ನೇ ವರ್ಷಕ್ಕೆ ಕಾಲಿಟ್ಟಿದ್ದು ತಮ್ಮ ಹುಟ್ಟುಹಬ್ಬವನ್ನು ಲೋಕಸಭೆ ಕ್ಷೇತ್ರವಾದ ವಾರಾಣಾಸಿಯಲ್ಲಿ ಶಾಲಾ ಮಕ್ಕಳ ಜತೆ ...

ಮೋದಿಗೆ 68ನೇ ಹುಟ್ಟುಹಬ್ಬ: ವಾರಣಾಸಿಯಲ್ಲಿ ಮಕ್ಕಳೊಂದಿಗೆ ಆಚರಣೆ; ಶುಭಾಶಯಗಳ ಮಹಾಪೂರ
ನರೇಂದ್ರ ಮೋದಿ
Published On :
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು 68ನೇ ವರ್ಷಕ್ಕೆ ಕಾಲಿಟ್ಟಿದ್ದು ತಮ್ಮ ಹುಟ್ಟುಹಬ್ಬವನ್ನು ಲೋಕಸಭೆ ಕ್ಷೇತ್ರವಾದ ವಾರಾಣಾಸಿಯಲ್ಲಿ ಶಾಲಾ ಮಕ್ಕಳ ಜತೆ ಆಚರಿಸಿಕೊಳ್ಳಲಿದ್ದಾರೆ. 
ಇಂದು ಮತ್ತು ನಾಳೆ ಪ್ರಧಾನಿಯ ವಾರಾಣಾಸಿ ಭೇಟಿ ನಿಗದಿಯಾಗಿದ್ದು, ಕಾಶಿ ವಿಶ್ವನಾಥ ದೇಗುಲದಲ್ಲಿ ಅವರು ಪ್ರಾರ್ಥನೆ ಸಲ್ಲಿಸಲಿದ್ದಾರೆ. ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿರುವ ಪ್ರಧಾನಿ ಬಳಿಕ ಶಾಲಾ ಮಕ್ಕಳ ಜತೆ ಕಾಲ ಕಳೆಯಲಿದ್ದಾರೆ.
ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಟ್ವಿಟರ್‌ ಮೂಲಕ ಪ್ರಧಾನಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ. ಮೋದಿ ಅವರಿಗೆ ದೀರ್ಘಾಯುಷ್ಯ ದೇಶಕ್ಕೆ ಇನ್ನಷ್ಟು ಸೇವೆ ದೊರೆಯಲಿ ಎಂದು ಆಶಿಸಿದ್ದಾರೆ.
ಮೋದಿ ಸಂಪುಟ ಸಚಿವ ಅರುಣ್ ಜೈಟ್ಲಿ, ಸಿಎಂ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ಗಣ್ಯರು ಟ್ವಿಟ್ಟರ್ ನಲ್ಲಿ ಮೋದಿ ಅವರಿಗೆ ಶುಭಾಶಯ ಕೋರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.