ಸಿಪಿಐ (ಎಂ) ನಿಂದಲೂ ಜಮ್ಮು-ಕಾಶ್ಮೀರದಲ್ಲಿ ಪಂಚಾಯತ್ ಚುನಾವಣೆ ಬಹಿಷ್ಕಾರ !
ಜಮ್ಮು-ಕಾಶ್ಮೀರದಲ್ಲಿ ಮುಂಬರುವ ಪಂಚಾಯತ್ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಬಹಿಷ್ಕರಿಸಲು ಸಿಪಿಐ (ಎಂ) ಪಕ್ಷ ನಿರ್ಧರಿಸಿದೆ.

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಮುಂಬರುವ ಪಂಚಾಯತ್ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಬಹಿಷ್ಕರಿಸಲು ಸಿಪಿಐ (ಎಂ) ಪಕ್ಷ ನಿರ್ಧರಿಸಿದೆ.
ಪ್ರಮುಖ ಪಕ್ಷಗಳಾದ ನ್ಯಾಷನಲ್ ಕಾನ್ಪರೆನ್ಸ್ ಹಾಗೂ ಪಿಡಿಪಿ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಿಂದ ಹಿಂದೆ ಸರಿದಿರುವುದಕ್ಕೆ ಕೇಂದ್ರಸರ್ಕಾರದ ವಿರುದ್ಧ ಸಿಪಿಐ ( ಎಂ) ವಾಗ್ದಾಳಿ ನಡೆಸಿದ್ದು, ಇದು ಬಿಜೆಪಿಯ ಸೊಕ್ಕನ್ನು ತೋರಿಸುತ್ತದೆ ಎಂದು ಸಿಪಿಐ ( ಎಂ ) ರಾಜ್ಯ ಕಾರ್ಯದರ್ಶಿ ಗುಲಾಂ ನಬಿ ಮಲ್ಲಿಕ್ ಹೇಳಿದ್ದಾರೆ.
ನ್ಯಾಷನಲ್ ಕಾನ್ಪರೆನ್ಸ್ ಹಾಗೂ ಪಿಡಿಪಿ ನಂತರ ಜಮ್ಮು-ಕಾಶ್ಮೀರದಲ್ಲಿ ಮೂರನೇ ಅತಿದೊಡ್ಡ ಪಕ್ಷವಾಗಿರುವ ಸಿಪಿಐ (ಎಂ) ಕೂಡಾ ಈಗ ಚುನಾವಣೆಯಿಂದ ದೂರ ಉಳಿಯುತ್ತಿದೆ.
ಈ ವಿಚಾರದ ಬಗ್ಗೆ ಸರ್ಕಾರ ಎಲ್ಲಾ ಪಕ್ಷಗಳ ಸಭೆ ಕರೆದು ಚರ್ಚಿಸಿ ಮನವೊಲಿಸಬೇಕಾಗಿತ್ತು. ಆದರೆ, ಹಾಗೆ ಮಾಡಿಲ್ಲ. ಈ ಪರಿಸ್ಥಿತಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಚುನಾವಣೆಯಲ್ಲಿ ಪಾಲ್ಗೊಳ್ಳದಿರಲು ಸಿಪಿಐ ( ಎಂ) ನಿರ್ಧರಿಸಿದೆ ಎಂದು ಅವರು ಪಕ್ಷದ ಪ್ರಧಾನ ಕಾರ್ಯದರ್ಶಿ ಹೇಳಿದ್ದಾರೆ.
ಸಂವಿಧಾನದ 35 ಎ ವಿಧಿ ಬಗ್ಗೆ ಕೇಂದ್ರ ಸರ್ಕಾರ ತನ್ನ ನಿಲುವನ್ನು ಸ್ಪಷ್ಪಪಡಿಸುವಂತೆ ಪ್ರಮುಖ ರಾಜಕೀಯ ಪಕ್ಷಗಳು ಆಗ್ರಹಿಸುತ್ತಿದ್ದರೂ ಸರ್ಕಾರ ತನ್ನ ಅನುಕೂಲಕ್ಕೆ ತಕ್ಕಂತೆ ಚುನಾವಣೆ ನಡೆಸುತ್ತಿರುವುದು ತಪ್ಪೆಂದು ಮಲ್ಲಿಕ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


