ನಮ್ಮದು ಜಾತಿ ಆಧಾರಿತ ಪಕ್ಷವಲ್ಲ, ಕೆಲಸ ಆಧಾರಿತ ಪಕ್ಷ: ನಿತೀಶ್ ಕುಮಾರ್
2019 ರ ಲೋಕಸಭೆ ಚುನಾವಣೆಯಲ್ಲಿ ಬಿಹಾರದಲ್ಲಿ ಸೀಟು ಹಂಚಿಕೆ ಸಂಬಂಧ ಎನ್ ಡಿಎ ಮೈತ್ರಿಕೂಟದ ಜೊತೆಗಿನ ಮಾತುಕತೆ ಅಂತಿಮ ಹಂತದಲ್ಲಿದ್ದು ಶೀಘ್ರವೇ ....

Published On :
ಪಾಟ್ನಾ: 2019 ರ ಲೋಕಸಭೆ ಚುನಾವಣೆಯಲ್ಲಿ ಬಿಹಾರದಲ್ಲಿ ಸೀಟು ಹಂಚಿಕೆ ಸಂಬಂಧ ಎನ್ ಡಿಎ ಮೈತ್ರಿಕೂಟದ ಜೊತೆಗಿನ ಮಾತುಕತೆ ಅಂತಿಮ ಹಂತದಲ್ಲಿದ್ದು ಶೀಘ್ರವೇ ಘೋಷಿಸಲಾಗುವುದು ಎಂದು ಜೆಡಿಯು ಹೇಳಿದೆ.
ತಮಗೆ ಗೌರವಾನ್ವಿತ ಸೀಟು ನೀಡಬೇಕೆಂದು ಜೆಡಿಯು ಮಿತ್ರ ಪಕ್ಷ ಬಿಜೆಪಿ ಮೇಲೆ ಒತ್ತಡ ಹೇರುತ್ತಿದೆ, ಲೋಕಸಭೆ ಚುನಾವಣೆಯಲ್ಲಿ ಸೀಟು ಹಂಚಿಕೆ ಸಂಬಂಧದ ಮಾತುಕತೆ ಅಂತಿಮ ಹಂತದಲ್ಲಿದೆ ಎಂದು ಜೆಡಿಯು ರಾಷ್ಟ್ರೀಯ ಅಧ್ಯಕ್ಷ ನಿತೀಶ್ ಕುಮಾರ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತಿಳಿಸಿದ್ದು, ಉನ್ನತ ಮಟ್ಟದಲ್ಲಿ ಶೀಘ್ರವೇ ಅಧಿಕೃತವಾಗಿ ಘೋಷಣೆ ಮಾಡಲಾಗುವುದು ಎಂದು ಜೆಡಿಯು ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಸದಸ್ಯ ರಾಮ ಚಂದ್ರ ಪ್ರಸಾದ್ ಸಿಂಗ್ ಹೇಳಿದ್ದಾರೆ.
ನಮ್ಮದು ಜಾತಿ ಆಧಾರಿತ ಪಕ್ಷವಲ್ಲ, "ಕೆಲಸ-ಆಧಾರಿತ" ಪಕ್ಷ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷವನ್ನು ಬಲ ಪಡಿಸುವಂತೆ ಕಾರ್ಯಕರ್ತರಿಗೆ ಸೂಚಿಸಿದ್ದಾರೆ,
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


