ರೂ.550 ಕೋಟಿ ಮೌಲ್ಯದ ಯೋಜನೆಗಳ ಘೋಷಣೆ: ವಾರಣಾಸಿಗೆ ಪ್ರಧಾನಿ ಮೋದಿ ಉಡುಗೊರೆ
ಲೋಕಸಭಾ ಕ್ಷೇತ್ರ ವಾರಣಾಸಿಗೆ ಭೇಟಿ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರೂ.550 ಕೋಟಿಯ ಅಭಿವೃದ್ಧಿ ಯೋಜನೆಗಳಿಗೆ ಮಂಗಳವಾರ ಚಾಲನೆ ನೀಡಿದ್ದಾರೆ...

Published On :
ವಾರಣಾಸಿ: ಲೋಕಸಭಾ ಕ್ಷೇತ್ರ ವಾರಣಾಸಿಗೆ ಭೇಟಿ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರೂ.550 ಕೋಟಿಯ ಅಭಿವೃದ್ಧಿ ಯೋಜನೆಗಳಿಗೆ ಮಂಗಳವಾರ ಚಾಲನೆ ನೀಡಿದ್ದಾರೆ.
ವಾರಣಾಸಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಳೇ ಕಾಶಿಗಾಗಿ ಇಂಟಿಗ್ರೇಟೆಡ್ ಪವರ್ ಡೆವಲಪ್ಮೆಂಟ್ ಸ್ಕೀಮ್ (ಐಪಿಡಿಎಸ್) ಮತ್ತು ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ಅಟಲ್ ಇನ್ಕ್ಯುಬೇಷನ್ ಸೆಂಟರ್ ಯೋಜನೆಗಳನ್ನು ಉದ್ಘಾಟಿಸಿದ್ದಾರೆ.
ಇದಲ್ಲದೆ ಹಲವು ಯೋಜನೆಗಳಿಗೆ ಚಾಲನೆ ನೀಡಿರುವ ಮೋದಿಯವರು, ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ಪ್ರಾದೇಶಿಕ ನೇತ್ರಶಾಸ್ತ್ರ ಕೇಂದ್ರಕ್ಕೆ ಶಂಕು ಸ್ಥಾಪನೆ ಮಾಡಿದ್ದಾರೆ.
ಯೋಜನೆಗಳಿಗೆ ಚಾಲನೆ ನೀಡದ ಬಳಿಕ ಜನತೆಯನ್ನುದ್ದೇಶಿಸಿ ಮಾತನಾಡಿರುವ ಅವರು, ಹರ ಹರ ಮಹಾದೇವ್ ಎಂದು ಕೂಗಿದ್ದಾರೆ. ಗಂಗೋತ್ರಿಯ ಗಂಗಾ ನದಿಯನ್ನು ಶುದ್ಧೀಕರಿಸು ಶ್ರಮ ಪಡಲಾಗುತ್ತಿದೆ. ಗಂಗಾ ನದಿ ಶುದ್ಧೀಕರಣ ಯೋಜನೆಗೆ ಈ ವರೆಗೂ ರೂ.21,000 ಕೋಟಿ ವೆಚ್ಚವಾಗಿದೆ. ವಾರಣಾಸಿಯಲ್ಲಿ ಪರ್ಯಾಟಣೆಯಿಂದ ಪರಿವರ್ತನೆಯ ಅಭಿಯಾನ ನಿರಂತವಾಗಿ ಜಾರಿಯಲ್ಲಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


