ಗೋವಾ ಸರ್ಕಾರ ರಚನೆಗೆ ಕಾಂಗ್ರೆಸ್ ಕಸರತ್ತು: ಬಿಜೆಪಿ ಏನು ಮಾಡಲಿದೆ ಎಂಬುದು ಅಮಿತ್ ಶಾ ಗೆ ಮಾತ್ರ ಗೊತ್ತು!
ಗೋವಾ ಹಾಲಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ದೀರ್ಘಾವಧಿಯ ಅನಾರೋಗ್ಯದಿಂದ ಬಳಲುತ್ತಿದ್ದು, ಪರಿಸ್ಥಿತಿಯ ಲಾಭ ಪಡೆಯಲು ಯತ್ನಿಸುತ್ತಿರುವ ಕಾಂಗ್ರೆಸ್, ಸರ್ಕಾರ ರಚನೆಗೆ ಹಕ್ಕು ಮಂಡಿಸಿದೆ.

Published On :
ಪಣಜಿ: ಗೋವಾ ಹಾಲಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ದೀರ್ಘಾವಧಿಯ ಅನಾರೋಗ್ಯದಿಂದ ಬಳಲುತ್ತಿದ್ದು, ಪರಿಸ್ಥಿತಿಯ ಲಾಭ ಪಡೆಯಲು ಯತ್ನಿಸುತ್ತಿರುವ ಕಾಂಗ್ರೆಸ್, ಸರ್ಕಾರ ರಚನೆಗೆ ಹಕ್ಕು ಮಂಡಿಸಿದೆ.
ಈ ಬೆಳವಣಿಗೆ ಬೆನ್ನಲ್ಲೇ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ದೆಹಲಿಗೆ ಗೋವಾ ಶಾಸಕರನ್ನು ಕರೆಸಿಕೊಂಡಿದ್ದು ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಗೋವಾದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗಳಿಸಿರುವ ಕಾಂಗ್ರೆಸ್ ಪಕ್ಷದ 16 ಶಾಸಕರು ಈಗಾಗಲೇ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದು, ವಿಪಕ್ಷ ನಾಯಕರಾಗಿರುವ ಚಂದ್ರಕಾಂತ್ ಕಲ್ವೆಕರ್ ಗೋವಾ ಸರಕರ ರಚನೆಗೆ ಹಕ್ಕು ಮಂಡಿಸಿದ್ದು, ನಮ್ಮ ಬಳಿ ಸರ್ಕಾರ ರಚಿಸಲು ಅಗತ್ಯವಿರುವ 21 ಶಾಸಕರ ಬೆಂಬಲ ಇದೆ ಎಂದು ಹೇಳಿದ್ದಾರೆ.
"ನಮ್ಮೊಂದಿಗೆ ಯಾರೆಲ್ಲಾ ಸಂಪರ್ಕದಲ್ಲಿದ್ದಾರೆ, ಏನೆಲ್ಲಾ ಚರ್ಚೆಗಳು ನಡೆದಿದೆ ಎಂಬುದನ್ನು ಬಹಿರಂಗಪಡಿಸುವುದಿಲ್ಲ, ಆದರೆ ಸರ್ಕಾರ ರಚನೆ ಮಾಡುವುದಕ್ಕೆ ಅಗತ್ಯವಿರುವಷ್ಟು ಬಹುಮತ ಇದೆ ಎಂದು ಹೇಳಿದ್ದಾರೆ. ರಾಜ್ಯಪಾಲ ಮೃದುಲಾ ಸಿನ್ಹಾ ಅವರನ್ನು ಭೇಟಿ ಮಾಡಿರುವ ಚಂದ್ರಕಾಂತ್ ಕಲ್ವೆಕರ್ ಗೋವಾ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದು ರಾಜ್ಯಪಾಲರಿಂದ ಪ್ರತಿಕ್ರಿಯೆಗೆ ಎದುರು ನೋಡುತ್ತಿದ್ದಾರೆ.
ಗೋವಾದಲ್ಲಿ ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರ ಆಡಳಿತ ನಡೆಸುತ್ತಿದ್ದು, ಕಾಂಗ್ರೆಸ್ ಪಕ್ಷದ ನಡೆಯ ಬೆನ್ನಲ್ಲೇ ಬಿಜೆಪಿ ಶಾಸಕರೊಂದಿಗೆ ಸಮಾಲೋಚನೆ ನಡೆಸುತ್ತಿರುವ ಅಮಿತ್ ಶಾ ಸರ್ಕಾರ ಉಳಿಸಿಕೊಳ್ಳುವುದಕ್ಕೆ ತಂತ್ರ ಹೆಣೆಯುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


