ದೇಶ

ನಾಸಿಕ್: ಸೆಕ್ಸ್ ಗೆ ಬೇಡಿಕೆ ಇಟ್ಟ ಇಬ್ಬರು ಪ್ರಾಧ್ಯಾಪಕರ ಬಂಧನ

ಸೆಕ್ಸ್ ಗೆ ಸಹಕರಿಸುವಂತೆ 12ನೇ ತರಗತಿ ವಿದ್ಯಾರ್ಥಿನಿಗೆ ಒತ್ತಡ ಹಾಕಿದ ಆರೋಪದ ಮೇಲೆ ಮಹಾರಾಷ್ಟ್ರದ ನಾಸಿಕ್...

ನಾಸಿಕ್: ಸೆಕ್ಸ್ ಗೆ ಬೇಡಿಕೆ ಇಟ್ಟ ಇಬ್ಬರು ಪ್ರಾಧ್ಯಾಪಕರ ಬಂಧನ
ಸಾಂದರ್ಭಿಕ ಚಿತ್ರ
Published On :
ಮುಂಬೈ: ಸೆಕ್ಸ್ ಗೆ ಸಹಕರಿಸುವಂತೆ 12ನೇ ತರಗತಿ ವಿದ್ಯಾರ್ಥಿನಿಗೆ ಒತ್ತಡ ಹಾಕಿದ ಆರೋಪದ ಮೇಲೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಖಾಸಗಿ ಕಾಲೇಜ್ ನ ಇಬ್ಬರು ಪ್ರಾಧ್ಯಾಪಕರನ್ನು ಬಂಧಿಸಲಾಗಿದೆ ಎಂದು ಬುಧವಾರ ಪೊಲೀಸರು ತಿಳಿಸಿದ್ದಾರೆ.
ನಿನ್ನೆ ಸಂಜೆ ಪ್ರಾಧ್ಯಾಪಕರ ಕಾಮಕಾಂಡ ಬೆಳಕಿಗೆ ಬಂದಿದ್ದು, ಈ ಸಂಬಂಧ 19 ವರ್ಷದ ವಿದ್ಯಾರ್ಥಿನಿಯೊಬ್ಬರು ಅಡಗಾನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಸೆಕ್ಸ್ ಗೆ ಸಹಕರಿಸಿದರೆ 12ನೇ ತರಗತಿ ಪರೀಕ್ಷೆಯಲ್ಲಿ ಪಾಸ್ ಮಾಡಿಸುವುದಾಗಿ ಪ್ರಾಧ್ಯಾಪಕರು ಒತ್ತಾಯಿಸುತ್ತಿರುವುದಾಗಿ ವಿದ್ಯಾರ್ಥಿನಿ ದೂರಿನಲ್ಲಿ ಆರೋಪಿಸಿದ್ದಾರೆ.
ಈ ಇಬ್ಬರು ಪ್ರಾಧ್ಯಾಪಕರು 2015ರಿಂದ ತಮ್ಮನ್ನು ಹಿಂಬಾಲಿಸುತ್ತಿದ್ದು, ತಮ್ಮ ಕೈ ಹಿಡಿಯುವುದು ಹಾಗೂ ಅನುಚಿತವಾಗಿ ವರ್ತಿಸಿದ್ದಾರೆ ಎಂದು ದೂರಿದ್ದಾರೆ.
ವಿದ್ಯಾರ್ಥಿನಿ ನೀಡಿದ ದೂರಿನ ಆಧಾರದ ಮೇಲೆ ಪ್ರಾಧ್ಯಾಪಕರಾದ ಪ್ರವೀಣ್ ಸೂರ್ಯವಂಶಿ ಮತ್ತು ಸಚಿನ್ ಸೋನವಾನೆ ವಿರುದ್ಧ ಐಪಿಸಿ ಸೆಕ್ಷನ್ 354 ಎ(ಲೈಂಗಿಕ ಕಿರುಕುಳ), 354 ಬಿ(ಹಿಂಬಾಲಿಸು) ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.