ದೇಶ

ಹಿಂದುಗಳಿಗೆ ಒಂದು ಭರವಸೆಯಾದರು ಈಡೇರಿಸಿ, ತ್ರಿವಳಿ ತಲಾಖ್ ಮಾರ್ಗದಂತೆ ರಾಮ ಮಂದಿರ ನಿರ್ಮಿಸಿ: ಶಿವಸೇನೆ

ತ್ರಿವಳಿ ತಲಾಖ್ ನಿಷೇಧಿಸುವ ಮತ್ತು ಶಿಕ್ಷಾರ್ಹ ಅಪರಾಧ ಎಂದು ಪರಿಗಣಿಸುವುದಕ್ಕೆ ಸಂಬಂಧಿಸಿದಂತೆ ತಿದ್ದುಪಡಿ ಮಸೂದೆಯನ್ನು ಸುಗ್ರೀವಾಜ್ಞೆ ಹೊರಡಿಸುವ ಪ್ರಸ್ತಾಪಕ್ಕೆ ಅನುಮೋದನೆ ಪಡೆದಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಶಿವಸೇನೆ...

ಹಿಂದುಗಳಿಗೆ ಒಂದು ಭರವಸೆಯಾದರು ಈಡೇರಿಸಿ, ತ್ರಿವಳಿ ತಲಾಖ್ ಮಾರ್ಗದಂತೆ ರಾಮ ಮಂದಿರ ನಿರ್ಮಿಸಿ: ಶಿವಸೇನೆ
ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ
Published On :
ಮುಂಬೈ: ತ್ರಿವಳಿ ತಲಾಖ್ ನಿಷೇಧಿಸುವ ಮತ್ತು ಶಿಕ್ಷಾರ್ಹ ಅಪರಾಧ ಎಂದು ಪರಿಗಣಿಸುವುದಕ್ಕೆ ಸಂಬಂಧಿಸಿದಂತೆ ತಿದ್ದುಪಡಿ ಮಸೂದೆಯನ್ನು ಸುಗ್ರೀವಾಜ್ಞೆ ಹೊರಡಿಸುವ ಪ್ರಸ್ತಾಪಕ್ಕೆ ಅನುಮೋದನೆ ಪಡೆದಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಶಿವಸೇನೆ ಗುರುವಾರ ಸ್ವಾಗತಿಸಿದೆ. 
ಈ ಕುರಿತಂತೆ ಮಾತನಾಡಿರುವ ಶಿವಸೇನೆ ಮುಖ್ಯಸ್ಥ ಉದ್ಧವಾ ಠಾಕ್ರೆಯವರು ತ್ರಿವಳಿ ತಲಾಖ್ ಕುರಿತ ಕೇಂದ್ರ ಸರ್ಕಾರದ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ. ಇದೇ ರೀತಿಯ ಅಯೋಧ್ಯೆಯಲ್ಲಿಯೂ ರಾಮ ಮಂದಿನ ನಿರ್ಮಾಣ ಕುರಿತಂತೆ ನಿರ್ಧಾರನಗಳನ್ನು ತೆಗೆದುಕೊಳ್ಳಬೇಕೆಂದು ಸರ್ಕಾರವನ್ನು ಆಗ್ರಹಿಸುತ್ತೇವೆಂದು ಹೇಳಿದ್ದಾರೆ. 
ದೇಶದ ಹಿಂದೂಗಳಿಗೆ ಸರ್ಕಾರ ನೀಡಿದ್ದ ಭರವಸೆಗಳಲ್ಲಿ ಒಂದು ಭರವಸೆಯನ್ನಾದರೂ ಸರ್ಕಾರ ಈಡೇರಿಸಲು ನಿರ್ಧಾರಗಳನ್ನು ಕೈಗೊಳ್ಳಬೇಕು. ಹಿಂದೂಗಳ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ರಾಮ ಮಂದಿರ ನಿರ್ಮಾಣ ಕುರಿತಂತೆ ನಿರ್ಧಾರ ತೆಗೆದುಕೊಳ್ಳಬೇಕೆಂದು ತಿಳಿಸಿದ್ದಾರೆ. 
ಪತ್ನಿಯರಿಗೆ ತ್ರಿವಳಿ ತಲಾಖ್ ನೀಡುವ ವ್ಯಕ್ತಿ ಜಾಮೀನು ಪಡೆಯಬಹುದಾದ ಅವಕಾಶವಿರುವ ಅಂಶವುಳ್ಳ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಆಗಸ್ಟ್ ನಲ್ಲಿ ಅನುಮೋದನೆ ನೀಡಿತ್ತು. ಆದರೆ, ರಾಜ್ಯಸಭೆಯಲ್ಲಿ ಅನುಮೋದನೆ ಪಡೆಯುವುದು ಸಾಧ್ಯವಾಗಿರಲಿಲ್ಲ. ಹೀಗಾಗಿ ಕೇಂದ್ರ ಸರ್ಕಾರ ಇದೀಗ ಸುಗ್ರೀವಾಜ್ಞೆ ಮೊರೆ ಹೋಗಿದ್ದು, ಈ ಸುಗ್ರೀವಾಜ್ಞೆ ಹೊರಡಿಸುವ ಪ್ರಸ್ತಾಪಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದುಕೊಂಡಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.