ಕೇರಳ ನನ್ ಅತ್ಯಾಚಾರ ಪ್ರಕರಣ: ಬಿಷಪ್ ಫ್ರಾಂಕೊ ಅಮಾನತುಗೊಳಿಸಿದ ವ್ಯಾಟಿಕನ್
ವ್ಯಾಟಿಕನ್, ಕೇರಳದ ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಜಲಂಧರ್'ನ...

Published On :
ಕೊಚ್ಚಿ: ವ್ಯಾಟಿಕನ್, ಕೇರಳದ ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಜಲಂಧರ್'ನ ರೋಮನ್ ಕ್ಯಾಥೋಲಿಕ್ ಬಿಷಪ್ ಫ್ರಾಂಕೊ ಮುಲಕ್ಕಲ್ ಅವರನ್ನು ತಾತ್ಕಾಲಿಕವಾಗಿ ಹುದ್ದೆಯಿಂದ ತೆರವುಗೊಳಿಸದೆ.
ಮುಲಕ್ಕಲ್ ಅವರು, ತಮ್ಮ ವಿರುದ್ಧ ಅತ್ಯಾಚಾರ ಪ್ರಕರಣದ ತನಿಖೆ ನಡೆಯುತ್ತಿದ್ದು, ತನಿಖೆ ಮುಗಿಯುವವರೆಗೆ ತಮ್ಮನ್ನು ಹುದ್ದೆಯಿಂದ ತೆರವುಗೊಳಿಸುವಂತೆ ವ್ಯಾಟಿಕನ್ ಪೋಪ್ ಫ್ರಾನ್ಸಿಸ್ ಅವರಿಗೆ ಪತ್ರ ಬರೆದಿದ್ದರು.
ಮುಲಕ್ಕಲ್ ಮನವಿಯನ್ನು ಪುರಸ್ಕರಿಸಿದ ಪೋಪ್, ಅವರನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿ, ಅವರ ಸ್ಥಾನಕ್ಕೆ ಬಾಂಬೆಯ ಪ್ರಧಾನ ಬಿಷಪ್ ಅಗ್ನೆಲೊ ರಫಿನೊ ಗ್ರೇಸಿಯಸ್ ಅವರನ್ನು ನೇಮಕ ಮಾಡಲಾಗಿದೆ.
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಲಕ್ಕಲ್ ಅವರು ಸೆಪ್ಟೆಂಬರ್ 11ರಂದು ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Vaticanವ್ಯಾಟಿಕನ್Bishop Franco MulakkalKerala nun rape caseಕೇರಳ ನನ್ ಅತ್ಯಾಚಾರ ಪ್ರಕರಣಬಿಷಪ್ ಫ್ರಾಂಕೊ ಮುಲಕ್ಕಲ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


