ರಫೇಲ್: 'ಹೆಚ್ಎಎಲ್ ಸಾಮರ್ಥ್ಯ' ಕುರಿತು ಸುಳ್ಳು ಹೇಳಿದ್ದ ರಕ್ಷಣಾ ಸಚಿವರು ರಾಜಿನಾಮೆ ನೀಡಲಿ- ರಾಹುಲ್
ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ವಿವಾದಕ್ಕೆ ಸಂಬಂಧಿಸಿದಂತೆ ಹೆಚ್ಎಎಲ್ ಸಾಮರ್ಥ್ಯ ಕುರಿತು ಸುಳ್ಳು ಹೇಳಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಸಿಕ್ಕಿಹಾಕಿಕೊಂಡಿದ್ದು, ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು...

Published On :
ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ವಿವಾದಕ್ಕೆ ಸಂಬಂಧಿಸಿದಂತೆ ಹೆಚ್ಎಎಲ್ ಸಾಮರ್ಥ್ಯ ಕುರಿತು ಸುಳ್ಳು ಹೇಳಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಸಿಕ್ಕಿಹಾಕಿಕೊಂಡಿದ್ದು, ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಗುರುವಾರ ಆಗ್ರಹಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ರಫೇಲ್ ಒಪ್ಪಂದ ಕುರಿತಂತೆ ಹಿಂದೂಸ್ಥಾನ್ ಏರೋನಾಟಿಕ್ ಲಿಮಿಟೆಡ್ (ಹೆಚ್ಎಎಲ್) ಮಾಜಿ ಮುಖ್ಯಸ್ಥರೇ ರಕ್ಷಣಾ ಸಚಿವರ ಸುಳ್ಳು ಕುರಿತು ಬೆಟ್ಟು ಮಾಡಿದ್ದು, ಇದೀಗ ರಕ್ಷಣಾ ಸಚಿವರ ಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಅವರು ಅಸಮರ್ಥನೀಯರಾಗಿದ್ದಾರೆಂದು ಹೇಳಿದ್ದಾರೆ.
ಭ್ರಷ್ಟಾಚಾರವನ್ನು ಸಮರ್ಥಿಸಿಕೊಂಡ ರಫೇಲ್ ಸಚಿವರು ಇದೀಗ ಬಹಿರಂಗವಾಗಿ ಸಿಕ್ಕಿ ಹಾಕಿಕೊಂಡಿದ್ದಾರೆ. ಹೆಚ್ಎಎಲ್ ಮಾಜಿ ಮುಖ್ಯಸ್ಥರು, ಟಿ.ಎಸ್ ರಾಜು ಅವರು ರಚಿವರ ಸುಳ್ಳು ಕುರಿತು ಬೆಟ್ಟು ಮಾಡಿದ್ದಾರೆ. ಹೀಗಾಗಿ ರಕ್ಷಣಾ ಸಚಿವೆ ಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಅವರು ಅಸಮರ್ಥನೀಯರಾಗಿದ್ದು, ಕೂಡಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.
ರಫೇಲ್ ಒಪ್ಪಂದ ಕುರಿತು ಸಮಿತಿ ಅಂತಿಮ ನಿರ್ಧಾರಗಳನ್ನು ಕೈಗೊಂಡಿತ್ತು. ಈ ವೇಳೆ ಮಾಜಿ ರಕ್ಷಣಾ ಸಚಿವ ಎಕೆ.ಆ್ಯಂಟನಿಯವರ ಮಧ್ಯಪ್ರವೇಶದಿಂದ ಒಪ್ಪಂದ ರದ್ದಾಗುವಂತಾಗಿತ್ತು. ರಫೇಲ್ ಒಪ್ಪಂದ ಹೆಚ್ಎಎಲ್'ಗೆ ಸಿಗಲು ಆ್ಯಂಟನಿ ಬೆಂಬಲ ನೀಡಿರಲಿಲ್ಲ ಎಂದು ನಿರ್ಮಲಾ ಸೀತಾರಾಮನ್ ಅವರು ಆರೋಪಿಸಿದ್ದರು.
ಈ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ್ದ ಆ್ಯಂಟನಿಯವರು ರಕ್ಷಣಾ ಸಚಿವೆ ಒಪ್ಪಂದಕ್ಕೆ ಸಂಬಂಧಿಸಿದಂತೆ ಮಾಹಿತಿ ಮುಚ್ಚಿಡುತ್ತಿದ್ದಾರೆ. ದೇಶದ ಭದ್ರತಾ ವಿಚಾರದಲ್ಲಿ ರಾಜಿ ಮಾಡುವ ಮೂಲಕ ಹಾಲಿ ಸರ್ಕಾರ ತಪ್ಪು ಮಾಡುತ್ತಿದೆ. ಹಾಲಿ ಸರ್ಕಾರ ಹೇಳುವಂತೆ ಯುಪಿಎ ಸರ್ಕಾರ ನಡೆಸಿದ್ದ ಒಪ್ಪಂದಕ್ಕಿಂದ ಮೋದಿ ಸರ್ಕಾರ ನಡೆಸಿದ ಒಪ್ಪಂದವೇ ಅಗ್ಗದ್ದಾಗಿದ್ದರೆ, ಕೇವಲ 36 ವಿಮಾನಗಳನ್ನೇಕೆ ಖರೀತಿ ಮಾಡಲಾಗುತ್ತಿದ ಎಂದು ಪ್ರಶ್ನಿಸಿದ್ದಾರೆ.
ಅಲ್ಲದೆ, ಹಾಲಿ ಸರ್ಕಾರದ ಅವಧಿಯಲ್ಲಿ ರಚನೆಯಾಗುವ ಜೆಪಿಸಿಯಲ್ಲಿ ಸರ್ಕಾರದ ಪರ ಇರುವ ಸದರಸ್ಯರೇ ಹೆಚ್ಚು ಇರಲಿದ್ದಾರೆ. ಸಮಿತಿ ಕಡತಗಳನ್ನು ಪರಿಶೀಲಿಸಿ ನಿರ್ಧರಿಸಲಿ. ಅದಕ್ಕೆ ಸರ್ಕಾರ ಹಿಂಜರಿಯುತ್ತಿದೆ ಎಂದು ಹೇಳಿದ್ದಾರೆ.
ಇದೇ ವೇಳೆ 2013ರ ಒಪ್ಪಂದದಲ್ಲಿ ತಾವು ಮಧ್ಯಪ್ರವೇಶಿಸಿದ್ದು ಅಂತಿಮ ಪಡಿಸಿದ್ದು ಎಂಬ ಆರೋಪವನ್ನೂ ತಿರಸ್ಕರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Rahul Gandhiರಾಹುಲ್ ಗಾಂಧಿHALರಫೇಲ್ ಯುದ್ಧ ವಿಮಾನRafale dealNirmala Sitharamanನಿರ್ಮಲಾ ಸೀತಾರಾಮನ್Rafale aircraftರಫೇಲ್ ಒಪ್ಪಂದ. ಹೆಚ್ಎಎಲ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


