ಇಡೀ ದೇಶವೇ ಸರ್ಜಿಕಲ್ ಸ್ಟ್ರೈಕ್ ದಿನವನ್ನು ಆಚರಿಸುತ್ತಿದ್ರೆ, ದೀದಿ ಸರ್ಕಾರ ಮಾತ್ರ ನಾ ಒಲ್ಲೆ ಅಂದಿದ್ದೇಕೆ!
2016ರ ಸೆಪ್ಟೆಂಬರ್ 29 ರಂದು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಭಯೋತ್ಪಾದಕರು ಹಾಗೂ ಅವರ ಗುಡಾರಗಳನ್ನು ಧ್ವಂಸಗೈದು ಭಾರತೀಯ ಯೋಧರು...

Published On :
ಕೋಲ್ಕತ್ತಾ: 2016ರ ಸೆಪ್ಟೆಂಬರ್ 29 ರಂದು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಭಯೋತ್ಪಾದಕರು ಹಾಗೂ ಅವರ ಗುಡಾರಗಳನ್ನು ಧ್ವಂಸಗೈದು ಭಾರತೀಯ ಯೋಧರು ಪರಾಕ್ರಮ ಮೆರೆದಿದ್ದ ಆ ದಿನವನ್ನು ಸರ್ಜಿಕಲ್ ಸ್ಟ್ರೈಕ್ ದಿನವನ್ನಾಗಿ ಆಚರಿಸಲು ಮಮತಾ ಬ್ಯಾನರ್ಜಿ ಸರ್ಕಾರ ನಿರಾಕರಿಸಿದೆ.
ದೇಶದಲ್ಲಿನ ವಿಶ್ವವಿದ್ಯಾಲಯಗಳಿಗೆ ಸರ್ಜಿಕಲ್ ಸ್ಟ್ರೈಕ್ ದಿನವನ್ನು ಆಚರಿಸುವಂತೆ ನಿರ್ದೇಶನ ನೀಡಿತ್ತು. ಆದರೆ ಪಶ್ಚಿಮ ಬಂಗಾಳ ಸರ್ಕಾರ ಮಾತ್ರ ರಾಜ್ಯದಲ್ಲಿ ದಿನಾಚರಣೆಯನ್ನು ಆಚರಿಸಲು ನಿರಾಕರಿಸಿದೆ.
ಪಶ್ಚಿಮ ಬಂಗಾಳದಲ್ಲಿ ಸರ್ಜಿಕಲ್ ಸ್ಟ್ರೈಕ್ ದಿನಾಚರಣೆಯನ್ನು ಆಚರಿಸುವುದಿಲ್ಲ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸೇನೆಯನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ರಾಜಕೀಯ ಮಾಡುತ್ತಿದೆ. ಚುನಾವಣೆಗೂ ಮುನ್ನ ದುರದ್ದೇಶದಿಂದ ಈ ಕೆಲಸ ಮಾಡುತ್ತಿದೆ ಎಂದು ಸಚಿವ ಪಾರ್ಥ ಚಟರ್ಜಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian Armyಪಶ್ಚಿಮ ಬಂಗಾಳWest BengalMamata Banerjeeಮಮತಾ ಬ್ಯಾನರ್ಜಿಭಾರತೀಯ ಸೇನೆSurgical Strike Dayಸರ್ಜಿಕಲ್ ಸ್ಟ್ರೈಕ್ ದಿನ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


