ಕಾಶ್ಮೀರ: ಬಂಡಿಪೋರಾದಲ್ಲಿ ಐವರು ಉಗ್ರರನ್ನು ಹೊಡೆದುರುಳಿಸಿದ ಸೇನೆ
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ನಡೆದ ಉಗ್ರ ನಿಗ್ರಹ ಕಾರ್ಯಾಚರಣೆ ವೇಳೆ ಭಾರತೀಯ ಸೇನೆ ಶುಕ್ರವಾರ...

Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ನಡೆದ ಉಗ್ರ ನಿಗ್ರಹ ಕಾರ್ಯಾಚರಣೆ ವೇಳೆ ಭಾರತೀಯ ಸೇನೆ ಶುಕ್ರವಾರ ಐವರು ಉಗ್ರರನ್ನು ಹೊಡೆದುರುಳಿಸಿದೆ.
ಕಣಿವೆ ರಾಜ್ಯ ಕಾಶ್ಮೀರದಲ್ಲಿ ಉಗ್ರರ ಹಾವಳಿ ಮುಂದುವರೆದಿರುವಂತೆಯೇ ಇತ್ತ ಸೇನೆ ಕೂಡ ಉಗ್ರರಿಗೆ ದಿಟ್ಟ ಉತ್ತರ ನೀಡುತ್ತಿದ್ದು, ಇಂದು ಬಂಡಿಪೋರಾ ಜಿಲ್ಲೆಯ ಸನ್ ಬ್ಲೇರ್ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ಗೆ ಎಲ್ ಇಟಿಯ ಐವರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇತ್ತೀಚಿಗೆ ಗಡಿ ನುಸುಳಿದ್ದ ಐವರು ಎಲ್ಇಟಿ ಉಗ್ರರು ಜಮ್ಮು ಮತ್ತು ಕಾಶ್ಮೀರದ ಇತರೆ ಭಾಗಗಳಿಗೆ ತೆರಳುತ್ತಿದ್ದರು. ಉಗ್ರರ ಖಚಿತ ಮಾಹಿತಿ ಪಡೆದ ಸೇನೆ, ಕಾರ್ಯಾಚರಣೆ ನಡೆಸಿ, ಐವರನ್ನು ಸದೆ ಬಡಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿನ್ನೆ ಬಂಡಿಪೋರಾದ ಸುಲ್ಮಾರ್ ಪ್ರದೇಶದಲ್ಲಿ ಅಡಗಿ ಕುಳಿತು ಸೇನೆ ಮೇಲೆ ದಾಳಿ ಮಾಡುತ್ತಿದ್ದ ಇಬ್ಬರು ಉಗ್ರರನ್ನು ಸೇನೆ ಗುಂಡಿಕ್ಕೆ ಹತ್ಯೆ ಮಾಡಿತ್ತು. ಸ್ಥಳದಲ್ಲಿ ಮತ್ತಷ್ಟು ಉಗ್ರರು ಅವಿತಿರುವ ಹಿನ್ನಲೆಯಲ್ಲಿ ಕಾರ್ಯಾಚರಣೆ ಮುಂದುವರೆದಿದೆ. ಪ್ರಸ್ತುತ ಸುತ್ತಮುತ್ತಲ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಕಟ್ಟೆಚ್ಚರದಿಂದ ಇರುವಂತೆ ಸೂಚಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


