ದೇಶ

ಮುಜಾಫರಪುರ್ ಸೆಕ್ಸ್ ಹಗರಣ: ಬಿಹಾರ ಮಾಜಿ ಸಚಿವೆ ಪತಿ ಬಂಧನಕ್ಕೆ ಆದೇಶ

ಮುಜಾಫರಪುರ್ ಶೆಲ್ಟರ್ ಹೋಮ್ ಸೆಕ್ಸ್ ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರ ಮಾಜಿ ಸಚಿವೆ ಮಂಜು ವರ್ಮಾ...

ಮುಜಾಫರಪುರ್ ಸೆಕ್ಸ್ ಹಗರಣ: ಬಿಹಾರ ಮಾಜಿ ಸಚಿವೆ ಪತಿ ಬಂಧನಕ್ಕೆ ಆದೇಶ
ಮಂಜು ವರ್ಮಾ
Published On :
ಪಾಟ್ನಾ: ಮುಜಾಫರಪುರ್ ಶೆಲ್ಟರ್ ಹೋಮ್ ಸೆಕ್ಸ್ ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರ ಮಾಜಿ ಸಚಿವೆ ಮಂಜು ವರ್ಮಾ ಅವರ ಪತಿಯ ವಿರುದ್ಧ ಪೊಲೀಸರು ಬಂಧನ ವಾರಂಟ್ ಹೊರಡಿಸಿದ್ದಾರೆ.
ಬೇಗುಸರಾಯಿ ಜಿಲ್ಲಾ ಪೊಲೀಸ್ ಅಧೀಕ್ಷಕ ಆದಿತ್ಯ ಕುಮಾರ್ ಅವರು ಮಂಜು ವರ್ಮಾ ಅವರ ಪತಿ ಚಂದ್ರಶೇಖರ್ ವರ್ಮಾ ಅವರ ವಿರುದ್ಧ ಬಂಧನ ವಾರಂಟ್ ಜಾರಿ ಮಾಡಿದ್ದಾರೆ.
ಬಿಹಾರ ಸರ್ಕಾರ ಮುಜಾಫರಪುರ್ ಸೆಕ್ಸ್ ಹಗರಣವನ್ನು ಸಿಬಿಐಗೆ ವಹಿಸಿದ ನಂತ ಚಂದ್ರಶೇಖರ್ ವರ್ಮಾ ಅವರ ಪಾಟ್ನಾ ಮತ್ತು ಬೇಗುಸರಾಯಿ ನಿವಾಸದ ಮೇಲೆ ದಾಳಿ ನಡೆಸಿದ್ದ ಸಿಬಿಐ ಅಧಿಕಾರಿಗಳು, ಮನೆಯಲ್ಲಿ 50 ಜೀವಂತ ಗುಂಡುಗಳನ್ನು ಜಪ್ತಿ ಮಾಡಿದ್ದಾರೆ.
ಚಂದ್ರಶೇಖರ್ ವರ್ಮಾ ಅವರ ವಿರುದ್ಧ ಸಿಬಿಐ ಅಧಿಕಾರಿಗಳು ಶಸ್ತ್ರಾಸ್ತ್ರ ಕಾಯ್ದೆ ಅಡಿ ಎಫ್ಐಆರ್ ದಾಖಲಿಸಿದ್ದು, ಈಗಾ ಮಾಜಿ ಸಚಿವೆಯ ಪತಿಯ ಬಂಧನಕ್ಕೆ ಬಲೆ ಬಿಸಿದ್ದಾರೆ.
ಕಳೆದ ಆಗಸ್ಟ್ ನಲ್ಲಿ ಬೇಗುಸರಾಯಿ ಜಿಲ್ಲಾ ಕೋರ್ಟ್, ಮಂಜು ವರ್ಮಾ ಹಾಗೂ ಅವರ ಪತಿ ಚಂದ್ರಶೇಖರ್ ವರ್ಮಾ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿತ್ತು.
ಮುಜಾಫರಪುರದ ಸರ್ಕಾರಿ ಆಶ್ರಯ ತಾಣದಲ್ಲಿದ್ದ 40 ಬಾಲಕಿಯರ ಪೈಕಿ 34 ಬಾಲಕಿಯರ ಮೇಲೆ ಅಲ್ಲಿನ ಸಿಬ್ಬಂದಿ, ಅದಿಕಾರಿಗಳು ಹಾಗೂ ರಾಜಕಾರಣಿಗಳು ನಿರಂತರ ಅತ್ಯಾಚಾರ ಎಸಗಿದ ಪ್ರಕರಣ ತನಿಖೆಯನ್ನು ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಸಿಬಿಐಗೆ ಒಪ್ಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.