ದೇಶ

ಮನೋಹರ್ ಪರಿಕ್ಕರ್ ಆಸ್ಪತ್ರೆಯಲ್ಲಿದ್ದುಕೊಂಡೇ ಬೆದರಿಕೆ ಹಾಕುತ್ತಿದ್ದಾರೆ: ಕಾಂಗ್ರೆಸ್

ಗೋವಾ ಸರ್ಕಾರ ರಚನೆಗೆ ಹಕ್ಕು ಮಂಡಿಸಿರುವ ಕಾಂಗ್ರೆಸ್ ಹಾಲಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ವಿರುದ್ಧ ಆರೋಪ ಮಾಡಿದ್ದು, ಆಸ್ಪತ್ರೆಯಿಂದಲೇ ಬೆದರಿಕೆ ಹಾಕುತ್ತಿದ್ದಾರೆ ಎಂದು ಹೇಳಿದೆ.

ಮನೋಹರ್ ಪರಿಕ್ಕರ್ ಆಸ್ಪತ್ರೆಯಲ್ಲಿದ್ದುಕೊಂಡೇ ಬೆದರಿಕೆ ಹಾಕುತ್ತಿದ್ದಾರೆ: ಕಾಂಗ್ರೆಸ್
Parrikar
Published On :
ಪಣಜಿ: ಗೋವಾ ಸರ್ಕಾರ ರಚನೆಗೆ ಹಕ್ಕು ಮಂಡಿಸಿರುವ ಕಾಂಗ್ರೆಸ್ ಹಾಲಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ವಿರುದ್ಧ ಆರೋಪ ಮಾಡಿದ್ದು, ಆಸ್ಪತ್ರೆಯಿಂದಲೇ ಬೆದರಿಕೆ ಹಾಕುತ್ತಿದ್ದಾರೆ ಎಂದು ಹೇಳಿದೆ. 
ಮನೋಹರ್ ಪರಿಕ್ಕರ್ ಅವರ ಆರೋಗ್ಯ ಸ್ಥಿತಿಗತಿಗಳ ಬಗ್ಗೆ ಮೆಡಿಕಲ್ ಬುಲೆಟಿನ್ ನ್ನು ಬಿಡುಗಡೆ ಮಾಡುವಂತೆ ಕಾಂಗ್ರೆಸ್ ಪಕ್ಷ ಇದೇ ವೇಳೆ ಆಗ್ರಹಿಸಿದೆ. ಮನೋಹರ್ ಪರಿಕ್ಕರ್ ವಿರುದ್ಧ ಗಂಭೀರ ಆರೋಪ ಮಾಡಿರುವ ಕಾಂಗ್ರೆಸ್ ಪಕ್ಷದ ವೀಕ್ಷಕ ಎ ಚೆಲ್ಲಕುಮಾರ್ " ಮನೋಹರ್ ಪರಿಕ್ಕರ್ ಆಸ್ಪತ್ರೆಯಲ್ಲಿರಬಹುದು, ಆದರೆ ಆಸ್ಪತ್ರೆಯಲ್ಲಿದ್ದುಕೊಂಡೇ ಜನರಿಗೆ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದೀರ ಎಂಬ ಮಾಹಿತಿ ಇದೆ ಎಂದು ಹೇಳಿದ್ದಾರೆ. 
ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರದ ಭಾಗವಾಗಿರುವ ಗೋವಾ ಫಾರ್ವರ್ಡ್ ಪಕ್ಷದ ಅಧ್ಯಕ್ಷ ವಿಜಯ್ ಸರ್ದೇಸಾಯಿ, " ಆಡಳಿತಾತ್ಮಕ ವಿಷಯಗಳಿಗೆ ಸಂಬಂಧಿಸಿದಂತೆ  ನಾನು ಮನೋಹರ್ ಪರಿಕ್ಕರ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದೇನೆ" ಎಂದು ಹೇಳಿರುವ ಬೆನ್ನಲ್ಲೇ ಕಾಂಗ್ರೆಸ್ ಈ ರೀತಿಯ ಆರೋಪ ಮಾಡಿದೆ. 
ಇದೇ ವೇಳೆ ಗೋವಾ ಲೋಕಾಯುಕ್ತದಿಂದ ನಡೆಯುತ್ತಿರುವ ತನಿಖೆಯ ಬಗ್ಗೆಯೂ ಮಾತನಾಡಿರುವ ಕಾಂಗ್ರೆಸ್ ನ ವೀಕ್ಷಕ, 1.44 ಲಕ್ಷ ಕೋಟಿ ಅಕ್ರಮ ಗಣಿಗಾರಿಕೆ ಹಗರಣದಲ್ಲಿ ಮುಖ್ಯಮಂತ್ರಿಗಳು ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಗೋವಾ ಲೋಕಾಯುಕ್ತದಲ್ಲಿ ತನಿಖೆ ನಡೆಯುತ್ತಿದ್ದು, ಆರೋಪ ಸಾಬೀತಾದರೆ ತಮ್ಮ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬಹುದೆಂದು ಜನರಿಗೆ ಮನೋಹರ್ ಪರಿಕ್ಕರ್ ಭರವಸೆ ನೀಡಬೇಕೆಂದು ಆಗ್ರಹಿಸಿದ್ದಾರೆ. 
ದೇವರು ಮನೋಹರ್ ಪರಿಕ್ಕರ್  ಆರೋಗ್ಯವನ್ನು ಉತ್ತಮಗೊಳಿಸಲಿ ಎಂದು ಪ್ರಾರ್ಥಿಸುತ್ತೇನೆ, ಈ ವರೆಗೂ ವಿವಿಧ ಭ್ರಷ್ಟಾಚಾರ ಪ್ರಕರಣಗಳ ಆರೋಪ ಎದುರಿಸುತ್ತಿದ್ದ ಮಾಜಿ ಸಚಿವರ ವಿರುದ್ಧ ಅವರು ಕ್ರಮಗಳನ್ನು ಕೈಗೊಂಡಿದ್ದರು. ಈಗ ಅವರ ವಿರುದ್ಧ ಕ್ರಮ ಕೈಗೊಳ್ಳುವ ಸರದಿ ಬಂದಿದೆ ಎಂಬುದನ್ನು ನೆನಪಿಸುತ್ತೇನೆ ಎಂದು ಕಾಂಗ್ರೆಸ್ ವೀಕ್ಷಕರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.