6 ವರ್ಷದ ಬಾಲಕಿಯನ್ನು ಅತ್ಯಾಚಾರಗೈದು, ಕೊಂದು ಶಾಲಾ ಶೌಚಾಲಯದಲ್ಲಿ ಬಿಸಾಡಿದ ದುರುಳರು!
ಉತ್ತರಪ್ರದೇಶದ ಗೊಂಡ ಜಿಲ್ಲೆಯ ಶಾಲೆಯೊಂದರ ಶೌಚಾಲಯದಲ್ಲಿ ಅರೆ ನಗ್ನ ಸ್ಥಿತಿಯಲ್ಲಿ ಆರು ವರ್ಷದ ಬಾಲಕಿಯೊಬ್ಬಳ ಮೃತದೇಹ ಪತ್ತೆಯಾಗಿದೆ...

Published On :
ಲಖನೌ: ಉತ್ತರಪ್ರದೇಶದ ಗೊಂಡ ಜಿಲ್ಲೆಯ ಶಾಲೆಯೊಂದರ ಶೌಚಾಲಯದಲ್ಲಿ ಅರೆ ನಗ್ನ ಸ್ಥಿತಿಯಲ್ಲಿ ಆರು ವರ್ಷದ ಬಾಲಕಿಯೊಬ್ಬಳ ಮೃತದೇಹ ಪತ್ತೆಯಾಗಿದೆ.
ಬಾಲಕಿಯನ್ನು ಅತ್ಯಾಚಾರಗೈದು ಆಕೆಯ ದೇಹವನ್ನು ಶಾಲಾ ಶೌಚಾಲಯದಲ್ಲಿ ಬಿಸಾಡಿ ಹೋಗಿರಬಹುದು ಎಂದು ಗೊಂಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಲಲ್ಲಾ ಸಿಂಗ್ ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಫರೆನ್ಸಿಕ್ ತಜ್ಞರು ಕೆಲ ಮಾದರಿಗಳನ್ನು ತೆಗೆದುಕೊಂಡು ಪರೀಕ್ಷೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಹೀಗಾಗಲೇ ಶಂಕಿತ ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎಂದು ಲಲ್ಲಾ ಸಿಂಗ್ ಹೇಳಿದ್ದಾರೆ.
ಸಮಾರಂಭವೊಂದರ ನಿಮಿತ್ತ ಬಾಲಕಿ ಮೂರು ದಿನಗಳ ಹಿಂದೆ ತಾತಾನ ಮನೆಗೆ ಬಂದಿದ್ದು ಗುರುವಾರ ಬೆಳಗ್ಗೆ ಆಕೆ ನಾಪತ್ತೆಯಾಗಿದ್ದು ಇಂದು ಆಕೆಯ ಮೃತದೇಹ ಪತ್ತೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


