ದೇಶ

ವಿಶ್ವದ ಅತಿದೊಡ್ಡ ಆರೋಗ್ಯ ಸೇವೆ 'ಆಯುಷ್ಮಾನ್ ಭಾರತ್'ಗೆ ಪ್ರಧಾನಿ ಮೋದಿ ಚಾಲನೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಕೇಂದ್ರ ...

ವಿಶ್ವದ ಅತಿದೊಡ್ಡ ಆರೋಗ್ಯ ಸೇವೆ 'ಆಯುಷ್ಮಾನ್ ಭಾರತ್'ಗೆ ಪ್ರಧಾನಿ ಮೋದಿ ಚಾಲನೆ
ರಾಂಚಿಯಲ್ಲಿ ಆರೋಗ್ಯ ಸೇವೆ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ
Published On :

ರಾಂಚಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಆಯುಷ್ಮಾನ್ ಯೋಜನೆಯನ್ನು ಉದ್ಘಾಟಿಸಿದರು. ಇದು ವಿಶ್ವದಲ್ಲಿಯೇ ಅತಿ ದೊಡ್ಡ ಸರ್ಕಾರಿ ಆರೋಗ್ಯ ಕಾರ್ಯಕ್ರಮವಾಗಿದೆ.

ಈ ಯೋಜನೆಗೆ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ(ಎಬಿ-ಪಿಎಂಜೆಎವೈ) ಎಂದು ಮರು ನಾಮಕರಣ ಮಾಡಲಾಗಿದ್ದು ದೇಶದ 50 ಕೋಟಿಗೂ ಅಧಿಕ ಫಲಾನುಭವಿಗಳನ್ನು ಇದರಲ್ಲಿ ಒಳಗೊಳ್ಳುವುದು ಉದ್ದೇಶವಾಗಿದೆ.

ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡು ಹೊಂದಿರುವ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 5 ಲಕ್ಷದವರೆಗೆ ಸಹಾಯ ನೀಡಲಿದ್ದು ದ್ವಿತೀಯ ಮತ್ತು ತೃತೀಯ ದರ್ಜೆಯ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೌಲಭ್ಯ ನೀಡಲಾಗುತ್ತದೆ. 10.74 ಲಕ್ಷ ಕುಟುಂಬಗಳು ಇದರ ಸೌಲಭ್ಯವನ್ನು ಪಡೆಯಲಿದ್ದಾರೆ.

ಯೋಜನೆ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ಸರ್ಕಾರಗಳು ಮತ್ತು ಆರೋಗ್ಯ ಸೇವೆ ವೃತ್ತಿಪರರು ಯೋಜನೆಯ ರಚನೆ ಮತ್ತು ಕಾರ್ಯವಿಧಾನಗಳ ಬಗ್ಗೆ ಅಧ್ಯಯನ ನಡೆಸಲಿದ್ದಾರೆ. ಅಮೆರಿಕಾ, ಕೆನಡಾ ಮತ್ತು ಮೆಕ್ಸಿಕೊ ಜನಸಂಖ್ಯೆಗಳಿಗಿಂತ ಭಾರತದಲ್ಲಿ ಆಯುಷ್ಮಾನ್ ಭಾರತ್ ಫಲಾನುಭವಿಗಳ ಸಂಖ್ಯೆ ಹೆಚ್ಚಾಗಿದೆ ಎಂದರು.

ಜಗತ್ತಿನಾದ್ಯಂತ ವಿವಿಧ ಸಂಘಟನೆಗಳು ಆಯುಷ್ಮಾನ್ ಭಾರತ್ ಯೋಜನೆ ಕುರಿತು ಅಧ್ಯಯನ ನಡೆಸಲಿದ್ದಾರೆ. ಮುಂದಿನ ದಿನಗಳಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುವವರು ಈ ಆರೋಗ್ಯ ಸೇವೆಯನ್ನು ಆಧರಿಸಿ ಹೊಸ ಯೋಜನೆಗಳನ್ನು ಜಾರಿಗೆ ತರಲಿದ್ದಾರೆ ಎಂದು ಹೇಳಿದರು.

ಆಯುಷ್ಮಾನ್ ಭಾರತ್ ಯೋಜನೆಯ ಸಹಾಯವಾಣಿ ಸಂಖ್ಯೆ 14555, ಜನರು ಈ ಸಂಖ್ಯೆಗೆ ಕರೆ ಮಾಡಿ ಯೋಜನೆಯ ಫಲವನ್ನು ಪಡೆದುಕೊಳ್ಳಬಹುದು. ಇದು ದೇಶದ ಬಡ ವರ್ಗದವರಿಗೆ ಆರೋಗ್ಯ ಸೌಲಭ್ಯ ಕಲ್ಪಿಸಲು ಇರುವ ಉತ್ತಮ ಯೋಜನೆಯಾಗಿದೆ ಎಂದು ಮೋದಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.