ದೇಶ

ಕುಪ್ವಾರದಲ್ಲಿ ಎನ್ ಕೌಂಟರ್ :2 ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ!

ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಕುಪ್ವಾರ ಸೆಕ್ಟರ್ ನಲ್ಲಿ ಉಗ್ರರ ಒಳ ನುಸುಳುವಿಕೆಯನ್ನು ವಿಫಲಗೊಳಿಸಿರುವ ಭದ್ರತಾ ಪಡೆ ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದೆ.

ಕುಪ್ವಾರದಲ್ಲಿ ಎನ್ ಕೌಂಟರ್ :2 ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ!
ಸಾಂದರ್ಭಿಕ ಚಿತ್ರ
Published On :

ಕುಪ್ವಾರ : ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಕುಪ್ವಾರ ಸೆಕ್ಟರ್ ನಲ್ಲಿ  ಉಗ್ರರ ಒಳ ನುಸುಳುವಿಕೆಯನ್ನು  ವಿಫಲಗೊಳಿಸಿರುವ ಭದ್ರತಾ ಪಡೆ  ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದೆ.

ಉಗ್ರರ ವಿರುದ್ಧದ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂಬುದು ತಿಳಿದುಬಂದಿದೆ. ಪುಲ್ವಾಮಾ ಜಿಲ್ಲೆಯ ಮಿರ್ ಮೊಹಲ್ಲಾ ಏರ್ ಪಾಲ್ ಟ್ರಾಲ್  ಪ್ರದೇಶದಲ್ಲಿ  ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಹಲವು ತಾಸುಗಳ ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿದೆ.

ಎನ್ ಕೌಂಟರ್ ನಲ್ಲಿ  ಉಗ್ರ ಸಂಘಟನೆ ಜೈಸ್ ಎ ಮೊಹಮ್ಮದ್ ಕಮಾಂಡರ್ ಅದಾನ್  ಹಾಗೂ ಮತ್ತೋರ್ವ ಉಗ್ರನನ್ನು ಹತ್ಯೆಯಲಾಗಿದ್ದು,ಅವರಿಂದ   ಭದ್ರತಾ ಪಡೆಗಳು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ.
ಗುಂಡಿನ ದಾಳಿ ವೇಳೆಯಲ್ಲಿ ನಾಗರಿಕರೊಬ್ಬರು ತೀವ್ರವಾಗಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.